
ಮುಂಬೈ(ಏ.22): ಬೌಲರ್‌ಗಳ ಪರಿಣಾಮಕಾರಿ ದಾಳಿಯ ಲವಾಗಿ ಡೆಲ್ಲಿ ಡೇರ್‌ಡೆವಿಲ್ಸ್ ತಂಡವನ್ನು 14 ರನ್‌ಗಳಿಂದ ಸೋಲಿಸಿದ ಮುಂಬೈ ಇಂಡಿಯನ್ಸ್, ಈ ಆವೃತ್ತಿಯಲ್ಲಿ ಸತತ 6ನೇ ಗೆಲುವು ದಾಖಲಿಸಿದೆ.
ಈ ಮೂಲಕ ಪ್ಲೇ-ಆಫ್ ಸ್ಥಾನಕ್ಕೆ ಮತ್ತಷ್ಟು ಹತ್ತಿರವಾಗಿದೆ. ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರೋಚಕ ಕಾದಾಟದಲ್ಲಿ ಮುಂಬೈ ನೀಡಿದ್ದ 143 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನತ್ತಲು ವಿಫಲವಾದ ಡೆಲ್ಲಿ, 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 128 ರನ್ ಗಳಿಸಲಷ್ಟೇ ಶಕ್ತವಾಯಿತು.
24 ರನ್ ಗಳಿಸುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿದ್ದ ಡೆಲ್ಲಿಗೆ ಕ್ರಿಸ್ ಮೋರಿಸ್ (52: 41 ಎಸೆತ, 5 ಬೌಂಡರಿ, 1 ಸಿಕ್ಸರ್) ಹಾಗೂ ಕಗಿಸೊ ರಬಾಡ (44: 39 ಎಸೆತ, 4 ಬೌಂಡಿ, 1 ಸಿಕ್ಸರ್) ಆಸರೆಯಾದರು. ಈ ಜೋಡಿ 7ನೇ ವಿಕೆಟ್‌ಗೆ 91 ರನ್ ಜೊತೆಯಾಟವಾಡಿ ತಂಡದ ಮಾನ ಕಾಪಾಡಿತು.
ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಕೂಡ ಡೆಲ್ಲಿ ದಾಳಿಗೆ ನಲುಗಿತು. ಅಮಿತ್ ಮಿಶ್ರಾ ಹಾಗೂ ಪ್ಯಾಟ್ ಕಮಿನ್ಸ್ ದಾಳಿ ಎದುರು ಮುಂಬೈ ಬ್ಯಾಟ್ಸ್‌ಮನ್‌ಗಳು ತಿಣುಕಾಡಿದರು. ಪೊಲಾರ್ಡ್ ಹಾಗೂ ಹಾರ್ದಿಕ್ ಪಾಂಡ್ಯ ಹೋರಾಟದ ನೆರವಿನಿಂದ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿತು.
ಸಂಕ್ಷಿಪ್ತ ಸ್ಕೋರ್
ಮುಂಬೈ: 20 ಓವರ್‌ಗಳಲ್ಲಿ 142/8 (ಬಟ್ಲರ್ 28, ಪೊಲಾರ್ಡ್ 26, ಮಿಶ್ರಾ 2/18)
ಡೆಲ್ಲಿ :20 ಓವರ್‌ಗಳಲ್ಲಿ 128/7 (ಮೋರಿಸ್ 52, ರಬಾಡ 44, ಮೆಕ್ಲನಾಘನ್ 3/24)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.