ಯುವರಾಜ್ ಸಿಂಗ್‌ಗೆ ಸ್ಪೆಷಲ್ ಗಿಫ್ಟ್ ನೀಡಿದ ಮುಂಬೈ ಇಂಡಿಯನ್ಸ್!

Published : Mar 06, 2019, 04:24 PM IST
ಯುವರಾಜ್ ಸಿಂಗ್‌ಗೆ ಸ್ಪೆಷಲ್ ಗಿಫ್ಟ್ ನೀಡಿದ  ಮುಂಬೈ ಇಂಡಿಯನ್ಸ್!

ಸಾರಾಂಶ

12ನೇ ಆವೃತ್ತಿ ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಪಾಲಾಗಿರುವ ಯುವರಾಜ್ ಸಿಂಗ್ ಇದೀಗ ಚುಟುಕು ಕ್ರಿಕೆಟ್‌ಗೆ ತಯಾರಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಯುವಿಗೆ ಮುಂಬೈ ಇಂಡಿಯನ್ಸ್ ಸ್ಪೆಷಲ್ ಗಿಫ್ಟ್ ನೀಡಿದೆ.

ಮುಂಬೈ(ಮಾ.06): ಐಪಿಎಲ್ ಟೂರ್ನಿಗೆ ಮುಂಬೈ ಇಂಡಿಯನ್ಸ್ ಇತರ ತಂಡಗಳಿಂತ ಹೆಚ್ಚಿನ ತಯಾರಿ ನಡೆಸುತ್ತಿದೆ. 12ನೇ ಆವೃತ್ತಿ ಟೂರ್ನಿಗೆ ಮುಂಬೈ ಇಂಡಿಯನ್ಸ್ ಸೇರಿಕೊಂಡಿರುವ ಟೀಂ ಇಂಡಿಯಾ ಆಲ್ರೌಂಡರ್ ಯುವರಾಜ್ ಸಿಂಗ್ ಜರ್ಸಿ ಬಿಡುಗಡೆಯಾಗಿದೆ. ಮುಂಬೈ ಇಂಡಿಯನ್ಸ್ ಯುವಿ ಜರ್ಸಿಯನ್ನ ಬಿಡುಗಡೆ ಮಾಡಿದೆ.

 

 

ಇದನ್ನೂ ಓದಿ: ರೋಹಿತ್ ಶರ್ಮಾ ಟ್ರೋಲ್ ಮಾಡಿದ ಮುಂಬೈ ಇಂಡಿಯನ್ಸ್!

ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಮೂಲ ಬೆಲೆ 1 ಕೋಟಿ ರೂಪಾಯಿ ನೀಡಿ ಯುವರಾಜ್ ಸಿಂಗ್ ಅವರನ್ನ ಖರೀದಿಸಿತ್ತು. 2018ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಕಳಪೆ ಪ್ರದರ್ಶನ ನೀಡಿದ ಯುವಿ 8 ಪಂದ್ಯಗಳಿಂದ 65 ರನ್ ಸಿಡಿಸಿದ್ದರು. 

ಇದನ್ನೂ ಓದಿ: ಐಪಿಎಲ್ 2019: ಮುಂಬೈ ಇಂಡಿಯನ್ಸ್‌ಗೆ ಹೊಸ ಜರ್ಸಿ!

2019ರ ಐಪಿಎಲ್ ಟೂರ್ನಿಯಲ್ಲಿ ಯುವಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. 2011ರ ವಿಶ್ವಕಪ್ ಹೀರೋ ಅಬ್ಬರದ ಬ್ಯಾಟಿಂಗ್ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಆದರೆ ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ಯುವಿ ಮತ್ತೆ ಘರ್ಜಿಸುತ್ತಾರ ಅನ್ನೋದು ಐಪಿಎಲ್ ಟೂರ್ನಿಯಲ್ಲಿ ಸ್ಪಷ್ಟವಾಗಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!
ಭಾರತ ಎದುರಿನ 3ನೇ ಏಕದಿನ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಬಿಗ್ ಶಾಕ್! 2 ಸ್ಟಾರ್ ಆಟಗಾರರು ಔಟ್!