
ನವದೆಹಲಿ(ಸೆ.16): ಟೀಂ ಇಂಡಿಯಾ ವಿಕೆಟ್ ಕೀಪರ್ ಕಮ್ ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಾಹಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. ಪ್ರಧಾನಿ ಮೋದಿಯ ಮಹತ್ವಾಂಕ್ಷೆಯ ಸ್ವಚ್ಚ ಭಾರತ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ವೃದ್ಧಿಮಾನ್ ಸಾಹಾಗೆ ಮೋದಿ ಆಹ್ವಾನ ನೀಡಿದ್ದಾರೆ.
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ಸೌರವ್ ಗಂಗೂಲಿ, ವಿವಿಎಸ್ ಲಕ್ಷಣ್, ಮೊಹಮ್ಮದ್ ಕೈಫ್ , ಹಾಲಿ ಕ್ರಿಕೆಟಿಗರಾದ ಸುರೇಶ್ ರೈನಾ, ಅಜಿಂಕ್ಯ ರಹಾನೆ ಸೇರಿದಂತೆ ಹಲವು ಕ್ರಿಕೆಟಿಗರು ಈಗಾಗಲೇ ಸ್ವಚ್ಚ ಭಾರತ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಇದೀಗ ವೃದ್ಧಿಮಾನ್ ಸಾಹ ಕೂಡ ಈ ಸಾಲಿಗೆ ಸೇರಿಕೊಂಡಿದ್ದಾರೆ.
ಪ್ರಧಾನಿ ಮೋದಿ ಇತ್ತೀಚೆಗೆ ಸ್ವಚ್ಚ ಭಾರತ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ವೃದ್ಧಿಮಾನ್ ಸಾಹಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಾಹ, ಪತ್ರ ಬರೆದಿರುವುದಕ್ಕೆ ಧನ್ಯವಾದ ಹೇಳಿದ್ದಾರೆ. ಇಷ್ಟೇ ಅಲ್ಲ, ಸ್ವಚ್ಚ ಭಾರತಕ್ಕಾಗಿ ನಾನು ನನ್ನ ಕೈಲಾದ ಸೇವೆ ಸಲ್ಲಿಸುತ್ತೇನೆ. ಜೊತೆಗೆ ಈಗಲೇ ನನ್ನ ಆಸು ಪಾಸಿನಲ್ಲಿ ಸ್ವಚ್ಚತಾ ಕಾರ್ಯ ಕೈಗೊಳ್ಳುತ್ತೇನೆ ಎಂದು ಸಾಹ ಹೇಳಿದ್ದಾರೆ.
ಇಂಜುರಿಯಿಂದಾಗಿ ಸದ್ಯ ಟೀಂ ಇಂಡಿಯಾದಿಂದ ಹೊರಗುಳಿದಿರುವ ವೃದ್ಧಿಮಾನ್ ಸಾಹ, ಶೀಘ್ರದಲ್ಲೇ ತಂಡಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಸಾಹ ಆಯ್ಕೆಯಾಗಿರಲಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.