ಏಷ್ಯನ್ ಗೇಮ್ಸ್ ಚಿನ್ನದ ಪದಕವನ್ನ ಅಟಲ್‌ಗೆ ಅರ್ಪಿಸಿದ ನೀರಜ್

By Web DeskFirst Published Aug 29, 2018, 4:26 PM IST
Highlights

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದರು. ಇದೀಗ ತಮ್ಮ ಪದಕವನ್ನ ಇತ್ತಿಚೆಗೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೆ ಅರ್ಪಿಸಿದ್ದಾರೆ.

ಜಕರ್ತಾ(ಆ.29): ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ 88.06 ಮೀಟರ್ ದೂರ ಎಸೆಯೋ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಇಷ್ಟೇ ಅಲ್ಲ ಏಷ್ಯನ್ ಗೇಮ್ಸ್‌ನಲ್ಲಿ ಗರಿಷ್ಠ ದೂರ ಎಸೆಯೋ ಮೂಲಕ ದಾಖಲೆ ಬರೆದಿದ್ದಾರೆ.

ಚಿನ್ನದ ಪದಕ ಗೆದ್ದು ದಾಖಲೆ ಬರೆದ ನೀರಜ್ ಚೋಪ್ರ ತನ್ನ ಪದಕನ್ನ ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೆ ಅರ್ಪಿಸಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದ್ದಾರೆ.

ನೀರಜ್ ಚೋಪ್ರಾ ಚಿನ್ನದ ಪದಕವನ್ನ ವಾಜಪೇಯಿಗೆ ಅರ್ಪಿಸೋ ಮೂಲಕ ಎಲ್ಲರ ಮನಗೆದ್ದಿದ್ದಾರೆ.  ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಭಾರತಕ್ಕೆ ಎರಡನೇ ಪದಕ ಗೆಲ್ಲಿಸಿಕೊಟ್ಟಿದ್ದಾರೆ. ನೀರಜ್‌ಗೂ ಮೊದಲು 1982ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದಿದ್ದರು.  ಗೋಲ್ಡ್ ಕೋಸ್ಟ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲೂ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು. 
 

click me!