ಕೊಹ್ಲಿಗೆ ಹೊಂದಿಕೊಳ್ಳುವ ಕೋಚ್'ಗಾಗಿ ಹುಡುಕಾಟ..!

Published : Jun 24, 2017, 09:07 AM ISTUpdated : Apr 11, 2018, 12:38 PM IST
ಕೊಹ್ಲಿಗೆ ಹೊಂದಿಕೊಳ್ಳುವ ಕೋಚ್'ಗಾಗಿ ಹುಡುಕಾಟ..!

ಸಾರಾಂಶ

ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಬಿಸಿಸಿಐ ಜುಲೈ 9 ವರೆಗೂ ಗಡುವು ವಿಸ್ತರಿಸಿದೆ. ಈ ಮೂಲಕ ಸಲ​ಹಾ ಸಮಿತಿಗೆ ಸೂಕ್ತ ಅಭ್ಯರ್ಥಿಯನ್ನು ನೇಮಿಸಲು ಮತ್ತಷ್ಟು ಆಯ್ಕೆಗಳನ್ನು ನೀಡಲು ನಿರ್ಧರಿಸಿದೆ.

ನವದೆಹಲಿ(ಜೂ.24): ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಸ್ಫೋಟಕ ಸತ್ಯ ಬಿಚ್ಚಿಟ್ಟಿದ್ದು, ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ನಾಯಕ ವಿರಾಟ್‌ ಕೊಹ್ಲಿಗೆ ಹೊಂದಿಕೊಳ್ಳುವಂತಹ ಕೋಚ್‌ ನೇಮಕಕ್ಕೆ ಹುಡುಕಾಟ ನಡೆಸುತ್ತಿದೆ ಎಂದಿದ್ದಾರೆ.

ವಿರಾಟ್‌'ಗೆ ಕೋಚ್‌ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಅಧಿಕಾರವಿಲ್ಲದಿದ್ದರೂ, ಕ್ರಿಕೆಟ್‌ ಸಲಹಾ ಸಮಿತಿ ಸದಸ್ಯರಾದ ಗಂಗೂಲಿ, ಸಚಿನ್‌ ತೆಂಡುಲ್ಕರ್‌ ಹಾಗೂ ವಿವಿಎಸ್‌ ಲಕ್ಷ್ಮಣ್‌ ಮಾಜಿ ಕೋಚ್‌ ಅನಿಲ್‌ ಕುಂಬ್ಳೆ ರಾಜೀನಾಮೆ ವಿವಾದದ ಬಳಿಕ, ಕೊಹ್ಲಿಗೆ ಹೊಂದಿಕೊಳ್ಳುವ ಕೋಚ್‌ ಅನ್ನು ನೇಮಿಸಲು ಮುಂದಾಗಿದೆ.

ಆ ಸ್ಥಾನಕ್ಕೆ ಯಾರು ಸೂಕ್ತ ಎನ್ನುವುದು ಸಲಹಾ ಸಮಿತಿ ಸದಸ್ಯರಿಗಿಂತ ಚೆನ್ನಾಗಿ ಮತ್ತಿನ್ಯಾರಿಗೆ ತಿಳಿದಿದೆ' ಎಂದು ಬಿಸಿಸಿಐ ಅಧಿಕಾರಿ ಹೇಳಿದ್ದಾರೆ.

ಅರ್ಜಿ ಸಲ್ಲಿಸಲು ಜು.9 ವರೆಗೂ ಅವಕಾಶ:

ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಬಿಸಿಸಿಐ ಜುಲೈ 9 ವರೆಗೂ ಗಡುವು ವಿಸ್ತರಿಸಿದೆ. ಈ ಮೂಲಕ ಸಲ​ಹಾ ಸಮಿತಿಗೆ ಸೂಕ್ತ ಅಭ್ಯರ್ಥಿಯನ್ನು ನೇಮಿಸಲು ಮತ್ತಷ್ಟು ಆಯ್ಕೆಗಳನ್ನು ನೀಡಲು ನಿರ್ಧರಿಸಿದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ. ಅಂತಿಮ ಪಟ್ಟಿಯಲ್ಲಿ ಅವರ ಹೆಸರುಗಳನ್ನು ಸೇರಿಸಲಾಗುತ್ತದೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 
16 ದಿನಗಳ ವಿಸ್ತರಣೆಗೊಂಡಿರುವ ಕಾರಣ, ತಂಡದ ಮಾಜಿ ನಿರ್ದೇಶಕ ರವಿಶಾಸ್ತ್ರಿಗೂ ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ. ಆಯ್ಕೆ ಮಾಡುವುದಾದರೆ ಮಾತ್ರ ಅರ್ಜಿ ಸಲ್ಲಿಸುತ್ತೇನೆ ಎಂದು ಶಾಸ್ತ್ರಿ ಸಲಹಾ ಸಮಿತಿಗೆ ಷರತ್ತು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆಯಾದರೂ ಯಾವುದೂ ಅಧಿಕೃತಗೊಂಡಿಲ್ಲ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?