
ನವದೆಹಲಿ(ಸೆ.14): ಮುಂದಿನ 6 ವಾರಗಳ ಕಾಲ ಭಾರತ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಸ್ಪಿನ್ನರ್‌ಗಳು ಇಲ್ಲಿನ ಕೋಟ್ಲಾ ಕ್ರೀಡಾಂಗಣದಲ್ಲಿ ಎಡೆಬಿಡದೇ ಅಭ್ಯಾಸದಲ್ಲಿ ತೊಡಗಿದ್ದಾರೆ. ಬುಧವಾರ ಬೆಳಗ್ಗೆ ಮೈದಾನಕ್ಕೆ ಇಳಿದಿದ್ದ ಕಿವೀಸ್‌ನ ಲೆಗ್ ಸ್ಪಿನ್ನರ್ ಇಶ್ ಸೋಧಿ, ಆಫ್ ಸ್ಪಿನ್ನರ್ ಮಾರ್ಕ್ ಕ್ರೇಗ್ ಮತ್ತು ಮಿಚೆಲ್ ಸಾಂಟ್ನರ್ ಸತತ ಎರಡು ಗಂಟೆಗಳ ಕಾಲ ಬೆವರುಹರಿಸಿದ್ದಾರೆ. ಈ ಸ್ಪಿನ್ನರ್‌ಗಳ ಎಸೆತಗಳಿಗೆ ಬ್ಯಾಟ್ಸ್‌ಮನ್‌ಗಳು ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಅಭ್ಯಾಸದಲ್ಲಿ ನಿರತರಾಗಿದ್ದರು.
ಭಾರತದ ಪಿಚ್‌ಗಳು ಸ್ಪಿನ್ ಬೌಲಿಂಗ್‌ಗೆ ಹೆಚ್ಚು ಸಹಕರಿಸಲಿವೆ. ಹೀಗಾಗಿ ಇಲ್ಲಿ ಸ್ಪಿನ್ ಬೌಲರ್‌ಗಳ ಆಟ ಮಾತ್ರ ನಡೆಯಲಿದೆ ಎಂಬುದನ್ನು ಅರಿತಿರುವ ನ್ಯೂಜಿಲೆಂಡ್ ತಂಡ ಸ್ಪಿನ್ನರ್‌ಗಳಂತೆ, ಬ್ಯಾಟ್ಸ್‌ಮನ್‌ಗಳನ್ನು ಅಂಗಣಕ್ಕಿಳಿಸಿತ್ತು. ಈ ಹಿಂದಿನ ಟೂರ್ನಿಗಳಲ್ಲಿ ಭಾರತದ ಸ್ಪಿನ್ನರ್‌ಗಳು ಪರಿಣಾಮಕಾರಿ ಬೌಲಿಂಗ್ ಮೂಲಕ ಗಮನಸೆಳೆದಿದ್ದಾರೆ. ಇದಕ್ಕಾಗಿ ಇದೇ 22ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಕಾನ್ಪುರದಲ್ಲಿ ನಡೆಯುವ ಈ ಪಂದ್ಯ ಭಾರತಕ್ಕೆ 500ನೇ ಟೆಸ್ಟ್ ಪಂದ್ಯವಾಗಿದೆ. ಭಾರತದ ಸ್ಟಾರ್ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಅವರ ಬೌಲಿಂಗ್ ಎದುರಿಸುವುದು ನಮ್ಮ ಬ್ಯಾಟ್ಸ್‌ಮನ್‌ಗಳಿಗೆ ಕಷ್ಟವಾಗಲಿದೆ.
ಹೀಗಾಗಿ ಮೂವರು ಸ್ಪಿನ್ನರ್‌ಗಳೊಂದಿಗೆ ಭಾರತ ಪ್ರವಾಸ ಕೈಗೊಳ್ಳುತ್ತಿರುವುದಾಗಿ ಕಿವೀಸ್ ಆಡಳಿತ ಮಂಡಳಿ ಈ ಹಿಂದೆ ಹೇಳಿತ್ತು. ಅದರಂತೆ ಮೂವರು ಸ್ಪಿನ್ನರ್‌ಗಳೊಂದಿಗೆ ಭಾರತಕ್ಕೆ ಬಂದಿಳಿದಿರುವ ಕಿವೀಸ್, ಶುಕ್ರವಾರ ದೆಹಲಿಯ ಕೋಟ್ಲಾ ಮೈದಾನದಲ್ಲಿ ರಣಜಿ ಚಾಂಪಿಯನ್ ತಂಡ ಮುಂಬೈ ಎದುರು ಅಭ್ಯಾಸ ಪಂದ್ಯವನ್ನಾಡಲಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.