
ದೆಹಲಿ(ಜೂನ್.11): ಟೀಮ್ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ಬ್ಯೂಟಿ ಅನುಷ್ಕಾ ಶರ್ಮಾ ನಡುವಿನ ಮದುವೆ ಬಳಿಕ,ಇದೀಗ ಭಾರತದಲ್ಲಿ ಕ್ರಿಕೆಟಿಗರ ಮದುವೆ ಪರ್ವ ಆರಂಭಗೊಂಡಿದೆ. ಇತ್ತೀಚೆಗೆ ಕರ್ನಾಟಕ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಮದುವೆಯಾದರೆ, ಪಂಜಾಬ್ ವೇಗಿ ಸಂದೀಪ್ ಶರ್ಮಾ ಎಂಗೇಜ್‌ಮೆಂಟ್ ಮುಗಿಸಿದ್ದಾರೆ. ಇದೀಗ ದೆಹಲಿ ಕ್ರಿಕೆಟಿಗ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟ್ಸ್‌ಮನ್ ನಿತೀಶ್ ರಾಣ ಸರದಿ.
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತ್ತಾ ಪರ ಅದ್ಬುತ ಪ್ರದರ್ಶನ ನೀಡಿದ ನಿತೀಶ್ ರಾಣ, ಇದೀಗ ತಮ್ಮ ಬಹುಕಾಲದ ಗೆಳತಿ ಸಾಚಿ ಮರ್ವಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿತೀಶ್ ರಾಣ ದೆಹಲಿ ಟೀಮ್‌ಮೇಟ್ ಧ್ರುವ ಶೋರೆ ಸಾಮಾಜಿಕ ಜಾಲತಾಣದಲ್ಲಿ ನೀತೀಶ್ ರಾಣ ಎಂಗೇಜ್‌ಮೆಂಟ್ ವಿಚಾರ ಬಹಿರಂಗ ಪಡಿಸಿದ್ದಾರೆ.
ಸಾಚಿ ಮರ್ವಾ ದೆಹಲಿಯಲ್ಲಿ ಇಂಟಿರಿಯರ್ ಆರ್ಕಿಟೆಕ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಬಹುಕಾಲದ ಗೆಳತಿ ಜೊತೆ ಸದ್ದಿಲ್ಲದೇ ಎಂಗೇಜ್‌ಮೆಂಟ್ ಮುಗಿಸಿರುವ ರಾಣ, ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.