
ನವದೆಹಲಿ(ಜು.03): ಚಾಂಪಿಯನ್ಸ್ ಟ್ರೋಫಿ ವೇಳೆ ನಾಯಕ ವಿರಾಟ್ ಕೊಹ್ಲಿ ಹಾಗೂ ಮಾಜಿ ಕೋಚ್ ಅನಿಲ್ ಕುಂಬ್ಳೆ ನಡುವೆ ಯಾವುದೇ ಭಿನ್ನಾಭಿಪ್ರಾಯ ಉಂಟಾಗಿರಲಿಲ್ಲ ಎಂದು ತಂಡದ ಮ್ಯಾನೇಜರ್ ಕಪಿಲ್ ಮಲ್ಹೋತ್ರಾ ಸ್ಪಷ್ಟಪಡಿಸಿದ್ದಾರೆ.
ಭಾರತ ತವರಿನ್ನಲ್ಲಾಗಲೀ ಅಥವಾ ವಿದೇಶದಲ್ಲಾಗಲೀ ಯಾವುದೇ ಸರಣಿಯನಗನಾಡಿದ ಬಳಿಕ ಸಾಮಾನ್ಯವಾಗಿ ಬಿಸಿಸಿಐಗೆ ವರದಿ ನೀಡುತ್ತಾರೆ.
ಇದೀಗ ಚಾಂಪಿಯನ್ಸ್ ಟ್ರೋಫಿ ವೇಳೆ ತಂಡದ ಕುರಿತು ಮಲ್ಹೋತ್ರ ವರದಿ ಸಲ್ಲಿಸಿದ್ದು, ಕುಂಬ್ಳೆ ಹಾಗೂ ಕೊಹ್ಲಿ ನಡುವೆ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ ಎಂದು ಉಲ್ಲೇಖಿಸಿದ್ದಾರೆ.
ಅನಿಲ್ ಕುಂಬ್ಳೆ ಕೋಚ್ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದಂತೆ, ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಎಲ್ಲವೂ ಸರಿಯಿಲ್ಲ ಎಂಬಂತ ವರದಿಗಳು ಹರಿದಾಡುತ್ತಿದ್ದವು. ಈ ಕುರಿತಂತೆ ಕಪಿಲ್ ಮಲ್ಹೋತ್ರ ವರದಿ ಸಲ್ಲಿಸಿದ್ದರು.
ಈ ವರದಿಯಲ್ಲಿ ಕೊಹ್ಲಿ, ಅನಿಲ್ ಕುಂಬ್ಳೆ ಅವರೊಂದಿಗೆ ಕನಿಷ್ಠ ಒರಟಾಗಿಯೂ ನಡೆದುಕೊಂಡಿರಲಿಲ್ಲವೆಂದು ಮಲ್ಹೋತ್ರ ತಿಳಿಸಿದ್ದಾರೆಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಅನಿಲ್ ಕುಂಬ್ಳೆ ದಿಢೀರ್ ರಾಜೀನಾಮೆ ಹಾಗೂ ರಾಜೀನಾಮೆಗೆ ಜಂಬೋ ಕೊಟ್ಟ ಕಾರಣಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮಲ್ಹೋತ್ರ ವರದಿಯೂ ವಸ್ತುನಿಷ್ಟವಾಗಿದೆಯೇ ಎನ್ನುವ ಕುರಿತಂತೆ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.