ಆಫ್ರಿಕಾ ಪಂದ್ಯದ ವೇಳೆಗೆ ವಿಜಯ್‌ ಶಂಕರ್ ಫಿಟ್!

Published : May 26, 2019, 08:47 AM IST
ಆಫ್ರಿಕಾ ಪಂದ್ಯದ ವೇಳೆಗೆ ವಿಜಯ್‌ ಶಂಕರ್ ಫಿಟ್!

ಸಾರಾಂಶ

ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನ ಇಂಜುರಿಗೆ ತುತ್ತಾಗಿದ್ದ ವಿಜಯ್ ಶಂಕರ್ ಫಿಟ್ನೆಸ್ ರಿಪೋರ್ಟ್ ಬಹಿರಂಗವಾಗಿದೆ. ದಕ್ಷಿಣ ಆಫ್ರಿಕಾದ ವಿರುದ್ಧದ ಮೊದಲ ಪಂದ್ಯದ ವೇಳೆಗೆ ವಿಜಯ್ ಶಂಕರ್ ಫಿಟ್ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಲಂಡನ್‌(ಮೇ26): ಐಸಿಸಿ ಏಕದಿನ ವಿಶ್ವಕಪ್‌ ಆರಂಭಕ್ಕೂ ಮುನ್ನ ಆತಂಕಕ್ಕೀಡಾಗಿದ್ದ ಭಾರತ ತಂಡ ನಿರಾಳವಾಗಿದೆ. ಶುಕ್ರವಾರ ಅಭ್ಯಾಸದ ವೇಳೆ ಗಾಯಗೊಂಡಿದ್ದ ಆಲ್ರೌಂಡರ್‌ ವಿಜಯ್‌ ಶಂಕರ್‌, ಜೂ.5ರಂದು ದ.ಆಫ್ರಿಕಾ ವಿರುದ್ಧ ನಡೆಯಲಿರುವ ಮೊದಲ ಪಂದ್ಯದ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ಬಿಸಿಸಿಐ ವೈದ್ಯಕೀಯ ತಂಡ ತಿಳಿಸಿದೆ. 

ಇದನ್ನೂ ಓದಿ: ವಿಶ್ವಕಪ್‌ನಲ್ಲಿ 2 ಥರದ ಜೆರ್ಸಿ ತೊಡಲಿರುವ ಭಾರತ

ಶುಕ್ರವಾರ ಬ್ಯಾಟಿಂಗ್‌ ಅಭ್ಯಾಸ ನಡೆಸುವ ವೇಳೆ ವಿಜಯ್‌ ಶಂಕರ್‌ ತೋಳಿಗೆ ಪೆಟ್ಟು ಬಿದ್ದಿತು. ಆದರೆ ತೋಳಿನ ಮೂಳೆ ಮುರಿದಿಲ್ಲ ಎನ್ನುವುದು ಎಕ್ಸ್‌-ರೇ ಮೂಲಕ ತಿಳಿದು ಬಂದಿದೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. 

ಇದನ್ನೂ ಓದಿ: ಕೊಹ್ಲಿ ಹಾಗೂ ಧೋನಿಗೆ ನಟಿ ಉರ್ವಶಿ ರೌಟೆಲಾ ಟ್ವೀಟ್

ಸದ್ಯ ಅಭ್ಯಾಸ ಪಂದ್ಯ ಆಡುತ್ತಿರುವ ಟೀಂ ಇಂಡಿಯಾ, ಮೊದಲ ಪಂದ್ಯದಲ್ಲಿ ನ್ಯೂಜೆಲೆಂಡ್ ವಿರುದ್ಧ ಮುಗ್ಗರಿಸಿದೆ. ಮೇ.30 ರಿಂದ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ. ಜುಲೈ 14 ರಂದು ಲಾರ್ಡ್ಸ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಭಾರತದ ಹೋರಾಟ ಜೂನ್ 5 ರಿಂದ ಆರಂಭಗೊಳ್ಳಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲ್ಕತಾ ಸ್ಟೇಡಿಯಂನಿಂದ ಲಿಯೋನೆಲ್ ಮೆಸ್ಸಿ ಬೇಗ ನಿರ್ಗಮನ; ಮಿತಿಮೀರಿದ ಅಭಿಮಾನಿಗಳ ದಾಂಧಲೆ!
ವಿರಾಟ್ ಕೊಹ್ಲಿಯಲ್ಲ, ಈ ಆಟಗಾರ ಹೆಚ್ಚು ಹಾರ್ಡ್‌ ವರ್ಕ್ ಮಾಡುವ ಆಟಗಾರ ಎಂದ ಯಶಸ್ವಿ ಜೈಸ್ವಾಲ್!