ಇಂಗ್ಲೆಂಡ್ ಲಯನ್ಸ್ ವಿರುದ್ಧ ಭಾರತ ಎ ತಂಡಕ್ಕೆ ಗೆಲುವು

Published : Jan 23, 2019, 09:00 PM IST
ಇಂಗ್ಲೆಂಡ್ ಲಯನ್ಸ್ ವಿರುದ್ಧ ಭಾರತ ಎ ತಂಡಕ್ಕೆ ಗೆಲುವು

ಸಾರಾಂಶ

ಭಾರತ ಎ ಹಾಗೂ ಇಂಗ್ಲೆಂಡ್ ಲಯನ್ಸ್  ನಡುವಿನ ಏಕದಿನ ಸರಣಿ ಆರಂಭಾಗಿದೆ. ರಹಾನೆ ನಾಯಕತ್ವದ ಭಾರತ ಎ ತಂಡ ಸರಣಿಯಲ್ಲಿ ಶುಭಾರಂಭ ಮಾಡಿದೆ. ಮೊದಲ ಏಕದಿನ ಪಂದ್ಯದ ಹೈಲೈಟ್ಸ್ ಇಲ್ಲಿದೆ.

ತಿರುವನಂತಪುರಂ(ಜ.23): ಇಂಗ್ಲೆಂಡ್ ಲಯನ್ಸ್ ವಿರುದ್ಧದ  ಮೊದಲ ಏಕದಿನ ಪಂದ್ಯದಲ್ಲಿ ಅಜಿಂಕ್ಯ ರಹಾನೆ ನಾಯಕತ್ವದ ಇಂಡಿಯಾ ಎ ತಂಡ ಗೆಲುವು ಸಾಧಿಸಿದೆ. ಈ ಮೂಲಕ 5 ಏಕದಿನ ಪಂದ್ಯಗಳ ಸರಣಿಯಲ್ಲಿ ಭಾರತ ಎ ತಂಡ 1-0 ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ: ಗೆಲುವಿನ ಬಳಿಕ ಧೋನಿ-ಕೊಹ್ಲಿ ಕ್ರೀಡಾಂಗಣದಲ್ಲಿ ಮಕ್ಕಳಾಟ-ವಿಡಿಯೋ ವೈರಲ್!

ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಲಯನ್ಸ್ ತಂಡ ಅದ್ಬುತ ಪ್ರದರ್ಶನ ನೀಡಿತು. ಸ್ಯಾಮ್ ಬಿಲ್ಲಿಂಗ್ಸ್ ಸಿಡಿಸಿದ ಭರ್ಜರಿ ಶತಕ ಹಾಗೂ ಅಲೆಕ್ಸ್ ಡೇವಿಸ್ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ 285 ರನ್ ಸಿಡಿಸಿತು.  ಭಾರತ ಎ ಪರ ಮಯಾಂಕ್ ಮಾರ್ಕಂಡೆ, ಅಕ್ಸರ್ ಪಟೇಲ್ ಹಾಗೂ ಸಿದ್ದಾರ್ಥ್ ಕೌಲ್ ತಲಾ 2 ವಿಕೆಟ್ ಕಬಳಿಸಿದರು.

ಇದನ್ನೂ ಓದಿ: ಬಿಸಿಸಿಐ ಕೈಪಿಡಿ ಓದದ ಹಾರ್ದಿಕ್‌, ರಾಹುಲ್‌?

286 ರನ್ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ನಾಯಕ ಅಜಿಂಕ್ಯ ರಹಾನೆ 59 ರನ್  ಸಿಡಿಸಿ ಆಸರೆಯಾದರು. ಇನ್ನು ಶ್ರೇಯಸ್ ಅಯ್ಯರ್ 45 ರನ್ ಸಿಡಿಸಿದರು. ಅಂತಿಮ ಹಂತದಲ್ಲಿ ಇಶಾನ್ ಕಿಶನ್ ಹಾಗೂ ಕ್ರುನಾಲ್ ಪಾಂಡ್ಯ ಅಬ್ಬರಿಸಿದರು. ಕಿಶನ್ ಅಜೇಯ 57 ರನ್ ಸಿಡಿಸಿದರೆ, ಕ್ರುನಾಲ್ ಪಾಂಡ್ಯ 29 ರನ್ ಸಿಡಿಸಿದರು. ಈ ಮೂಲಕ ಭಾರತ 3 ವಿಕೆಟ್ ಗೆಲುವು ಸಾಧಿಸಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ!
ವಿರಾಟ್ ಕೊಹ್ಲಿಯಲ್ಲ, ಈ ಆಟಗಾರ ಹೆಚ್ಚು ಹಾರ್ಡ್‌ ವರ್ಕ್ ಮಾಡುವ ಆಟಗಾರ ಎಂದ ಯಶಸ್ವಿ ಜೈಸ್ವಾಲ್!