
ಲಂಡನ್(ಮೇ.18): 2019ರ ಏಕದಿನ ವಿಶ್ವಕಪ್‌ನ ಅಧಿಕೃತ ಗೀತೆಯನ್ನು ಐಸಿಸಿ ಶುಕ್ರವಾರ ಬಿಡುಗಡೆ ಮಾಡಿತು.
‘ಸ್ಟ್ಯಾಂಡ್ ಬೈ’ ಹೆಸರಿನ ಈ ಗೀತೆಯನ್ನು ಹೊಸ ಕಲಾವಿದ ಲಾರಿನ್ ಹಾಗೂ ಬ್ರಿಟನ್‌ನ ಅತ್ಯಂತ ಯಶಸ್ವಿ ಹಾಗೂ ಪರಿಣಾಮಕಾರಿ ಸಂಗೀತ ಬ್ಯಾಂಡ್ ರುಡಿಮೆಂಟಲ್ ಒಟ್ಟಾಗಿ ರಚಿಸಿವೆ.
ಹೀಗಿದೆ ನೋಡಿ ವಿಶ್ವಕಪ್ ಗೀತೆ:
ಮೇ 30ರಿಂದ ಇಂಗ್ಲೆಂಡ್‌ನಲ್ಲಿ ವಿಶ್ವಕಪ್ ಅರಂಭಗೊಳ್ಳಲಿದ್ದು, ವಿಶ್ವಕಪ್ ಪಂದ್ಯಗಳು ನಡೆಯುವ ಎಲ್ಲಾ 11 ಕ್ರೀಡಾಂಗಣಗಳಲ್ಲಿ ಈ ಗೀತೆಯನ್ನು ಪ್ರಸಾರ ಮಾಡಲಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ. ಐಸಿಸಿ ತನ್ನ ವೆಬ್‌ಸೈಟ್‌ನಲ್ಲಿ ಈ ಗೀತೆಯನ್ನು ಹಾಕಿದ್ದು, ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.
ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ..
ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.