
ರೋಹ್ಟಕ್(ಮಾ.31): ಒಲಿಂಪಿಕ್ಸ್ ಕಂಚು ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲಿಕ್ ಏಪ್ರಿಲ್ 2ರಂದು ತಮ್ಮ ಬಹುದಿನಗಳ ಗೆಳೆಯ, ಸಹ ಕುಸ್ತಿಪಟು ಸತ್ಯವರ್ತ್ ಕಡಿಯಾನ್ ಅವರೊಂದಿಗೆ ಹಸೆಮಣೆ ಏರಲಿದ್ದಾರೆ.
ಹರ್ಯಾಣದ ರೋಹ್ಟಕ್'ನ ನಂದಲ್ ಭವನ್'ನಲ್ಲಿ ವಿವಾಹ ಮಹೋತ್ಸವ ನಡೆಯಲಿದ್ದು, ಶನಿವಾರ ಸಾಕ್ಷಿ ಮನೆಯಲ್ಲಿ ಮೆಹೆಂದಿ ಕಾರ್ಯಕ್ರಮ ಆಯೋಜಿಸಲಾಗಿದೆ. ರಿಯೋ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದು ಬಂದ ಬಳಿಕ ಕಳೆದ ಅಕ್ಟೋಬರ್'ನಲ್ಲಿ ಇಬ್ಬರ ನಿಶ್ಚಿತಾರ್ಥ ನಡೆದಿತ್ತು.
ಮದುವೆ ಅದ್ದೂರಿಯಾಗಿ ನಡೆಯಲಿದ್ದು ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ದೀಪಾ ಕರ್ಮಾಕರ್ ಸೇರಿದಂತೆ ಕ್ರೀಡಾ ತಾರೆಯರು ಆಗಮಿಸುವ ನಿರೀಕ್ಷೆ ಇದೆ.
‘‘ಪ್ರಧಾನಿ ನರೇಂದ್ರ ಮೋದಿ, ಹರ್ಯಾಣ ಮುಖ್ಯಮಂತ್ರಿ ಸೇರಿ ಗಣ್ಯಾತಿಗಣ್ಯರನ್ನು ಆಹ್ವಾನಿಸಿದ್ದು, ಮದುಗೆ ಸಕಲ ಸಿದ್ಧತೆ ನಡೆದಿದೆ’’ ಎಂದು ಸಾಕ್ಷಿ ತಾಯಿ ಸುದೇಶ್ ಮಲಿಕ್ ಹೇಳಿದ್ದಾರೆ.
ಅರ್ಜುನ ಪ್ರಶಸ್ತಿ ವಿಜೇತ ಸತ್ಯವಾನ್ ಕಡಿಯಾನ್ ಅವರ ಪುತ್ರ ಸತ್ಯವರ್ತ್ ಸಾಕ್ಷಿಗಿಂತ ವಯಸ್ಸಿನಲ್ಲಿ ಒಂದು ವರ್ಷ ಸಣ್ಣವರಾಗಿದ್ದಾರೆ. 2010ರ ಕಿರಿಯರ ಒಲಿಂಪಿಕ್ಸ್'ನಲ್ಲಿ ಕಂಚಿನ ಪದಕ ಗೆದ್ದಿದ್ದ ಸತ್ಯವರ್ತ್, 2014ರ ಕಾಮನ್'ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.