
ಲಾಹೋರ್(ಫೆ.12): ಪಾಕಿಸ್ತಾನ ಮಾಜಿ ವೇಗಿ ಶೋಯಿಬ್ ಅಕ್ತರ್ ವಿದಾಯದ ಬಳಿಕ ಚಾರಿಟಿ ಪಂದ್ಯ, ಆಲ್ ಸ್ಟಾರ್ ಕ್ರಿಕೆಟ್ ಸೇರಿದಂತೆ ಹಲವು ಟೂರ್ನಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಈ ವೇಗಿ ಮತ್ತೆ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಇಷ್ಟೇ ಅಲ್ಲ ಯುವ ವೇಗಿಗಳಿಗೆ ಚಾಲೆಂಜ್ ಕೂಡ ಹಾಕಿದ್ದಾರೆ.
ಇದನ್ನೂ ಓದಿ: ಲೋಕಸಭಾ ಚುನಾವಣೆ ದಿನಾಂಕ ನಿರ್ಧರಿಸಿದ ಬಳಿಕ ಐಪಿಎಲ್ ವೇಳಾಪಟ್ಟಿ ಪ್ರಕಟ!
ಫಾಸ್ಟ್ ಬೌಲಿಂಗ್ ಹೇಗೆ ಮಾಡುವುದು ಅನ್ನೋದನ್ನ ತೋರಿಸಿಕೊಡುತ್ತೇನೆ. ಇದೇ ಫೆಬ್ರವರಿ 14 ರಂದು ನಾನು ಕ್ರಿಕೆಟ್‌ಗೆ ವಾಪಾಸ್ಸಾಗುತ್ತಿದ್ದೇನೆ ಎಂದು ವಿಡಿಯೋ ಮೂಲಕ ಶೋಯಿಬ್ ಅಕ್ತರ್ ಸಂದೇಶ ರವಾನಿಸಿದ್ದಾರೆ.
ಇದನ್ನೂ ಓದಿ: ರೋಹಿತ್’ಗೆ ರೆಸ್ಟ್; ಈ ಇಬ್ಬರಿಗೆ ವಿಶ್ವಕಪ್ ಎಂಟ್ರಿ ಕೊಡಲು ಕೊನೆಯ ಚಾನ್ಸ್..?
ವಿಶ್ವದ ಅತ್ಯಂತ ವೇಗದ ಬೌಲಿಂಗ್ ಮಾಡಿದ ದಾಖಲೆ ಶೋಯಿಬ್ ಅಕ್ತರ್ ಹೆಸರಲ್ಲಿದೆ. ಅಕ್ತರ್ 161.3kph ಬೌಲಿಂಗ್ ಮಾಡಿ ದಾಖಲೆ ಬರೆದಿದ್ದಾರೆ. ಈ ವೇಗವನ್ನ ಯಾರೂ ಕೂಡ ಮುರಿದಿಲ್ಲ. ಇದೀಗ ಟ್ವಿಟರ್ ಮೂಲಕ ಮತ್ತೆ ಚಾಲೆಂಜ್ ಮಾಡಿರುವ ಶೋಯಿಬ್, ಅಭಿಮಾನಿಗಳ ಕುತೂಹಲ ಇಮ್ಮಡಿಗೊಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.