
ಕರಾಚಿ(ಮೇ.30): ಮುಂದಿನ ಆವೃತ್ತಿಯ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಆತಿಥ್ಯ ಪಾಕಿಸ್ತಾನಕ್ಕೆ ಸಿಕ್ಕಿದೆ. ಆದರೆ 2020ರ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ನಡೆಸಬೇಕಾದ ಅನಿವಾರ್ಯತೆ ಪಾಕಿಸ್ತಾನ ಗುರಿಯಾಗಿದ್ದು, ತನ್ನ 2ನೇ ತವರು ಯುಎಇನಲ್ಲಿ ಟೂರ್ನಿ ಆಯೋಜಿಸಲಿದೆ ಎನ್ನಲಾಗಿದೆ.
2020ರ ಟಿ20 ಏಷ್ಯಾಕಪ್ ಟೂರ್ನಿ ಯುಎಇನಲ್ಲಿ..?
ಮಂಗಳವಾರ ಸಿಂಗಾಪುರದಲ್ಲಿ ನಡೆದ ಏಷ್ಯಾ ಕ್ರಿಕೆಟ್ ಸಮಿತಿ (ಎಸಿಸಿ) ಸಭೆಯಲ್ಲಿ ಆತಿಥ್ಯ ಹಕ್ಕನ್ನು ಪಾಕಿಸ್ತಾನಕ್ಕೆ ನೀಡಲಾಯಿತು. ಮುಂದಿನ ವರ್ಷ ಅಕ್ಟೋಬರ್‌ನಲ್ಲಿ ಟಿ20 ವಿಶ್ವಕಪ್ ನಡೆಯಲಿರುವ ಕಾರಣ, ಏಷ್ಯಾ ಕಪ್ ಸಹ ಟಿ20 ಮಾದರಿಯಲ್ಲಿ ನಡೆಯಲಿದ್ದು, ಟೂರ್ನಿ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ.
ಬಾಂಗ್ಲಾ ವಿರುದ್ಧ ರೋಚಕ ಗೆಲುವು-ಭಾರತಕ್ಕೆ 7ನೇ ಏಷ್ಯಾಕಪ್ ಕಿರೀಟ
2018ರ ಏಷ್ಯಾಕಪ್ ಟೂರ್ನಿಗೆ ಯುನೈಟೆಡ್ ಅರಬ್ ಎಮಿರಾಟ್ಸ್ ಆತಿಥ್ಯ ವಹಿಸಿತ್ತು. ಫೈನಲ್ ನಲ್ಲಿ ಬಾಂಗ್ಲಾದೇಶವನ್ನು ಮೂರು ವಿಕೆಟ್ ಅಂತರದಲ್ಲಿ ಮಣಿಸಿ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.