
ಚೆನ್ನೈ(ಅ.12): ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ ವಿಜೇತ ಮರಿಯಪ್ಪನ್ ತಂಗವೇಲು ವಿರುದ್ಧ ಕೊಲೆ ಆರೋಪ ಕೇಳಿ ಬಂದಿದ್ದು, ಮದ್ರಾಸ್ ಹೈಕೋರ್ಟ್‌ನಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಕರಣದಲ್ಲಿ ಮರಿಯಪ್ಪನ್'ರನ್ನು ಪ್ರತಿವಾದಿಯನ್ನಾಗಿಸಿ ಅ.24ಕ್ಕೆ ವಿಚಾರಣೆಯನ್ನು ಮುಂದೂಡಿದ್ದಾರೆ. ಕಳೆದ ಜೂನ್ 3 ರಂದು ಕ್ಲೀನರ್ ಆಗಿದ್ದ ಸತೀಶ್ ಕುಮಾರ್ ಬೈಕ್'ನಲ್ಲಿ ಹೋಗುವಾಗ, ಮರಿಯಪ್ಪನ್ ಅವರ ಕಾರಿಗೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಸತೀಶ್ ಹಾಗೂ ಮರಿಯಪ್ಪನ್ ನಡುವೆ ವಾಗ್ವಾದ ನಡೆದಿತ್ತು. ಮರಿಯಪ್ಪನ್ ಹಾಗೂ ಆತನ ಸಹಚರರು ಸತೀಶ್ ಮೇಲೆ ಹಲ್ಲೆ ಕೂಡ ನಡೆಸಿದ್ದರು.
ಇದಾದ ಬಳಿಕ ನಾಪತ್ತೆಯಾಗಿದ್ದ ಸತೀಶ್, ರೈಲ್ವೆ ಟ್ರ್ಯಾಕ್'ವೊಂದರ ಬಳಿ ಶವವಾಗಿ ಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ಮಗನ ಸಾವಿಗೆ ಮರಿಯಪ್ಪನ್ ಕಾರಣ ಎಂದು ಆರೋಪಿಸಿ ಮೃತನ ಪೋಷಕರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.