
ಬೆಂಗಳೂರು(ಜೂ.09): ಇತ್ತೀಚೆಗಷ್ಟೇ ನಡೆದ ಪ್ಯಾರಾ ಶೂಟಿಂಗ್ ವಿಶ್ವಕಪ್ ಟೂರ್ನಿಯಲ್ಲಿ ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಜಯಿಸಿದ ಪ್ಯಾರಾಲಿಂಪಿಕ್ಸ್ ಚಾಂಪಿಯನ್ ಅವನಿ ಲೇಖರಾ (Avani Lekhara) ಅವರ ಕುರಿತಂತೆ ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂ ಸುದ್ದಿ ಪ್ರಕಟಿಸಿತ್ತು. ಈ ಸುದ್ದಿ ನೋಡಿ ಮೆಚ್ಚಿಕೊಂಡಿರುವ ಚಾಂಪಿಯನ್ ಶೂಟರ್ ಅವನಿ ಟ್ವೀಟ್ ಮೂಲಕ ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂಗೆ ಕನ್ನಡದಲ್ಲೇ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ
ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ (Para Shooting World Cup) ಮಹಿಳೆಯರ 10 ಮೀ. ಏರ್ ರೈಫಲ್ ಸ್ಪರ್ಧೆಯಲ್ಲಿ ಅವನಿ ಲೇಖರಾ 250.6 ಅಂಕ ಗಳಿಸಿ ತನ್ನದೇ ಹೆಸರಲ್ಲಿದ್ದ ಟೋಕಿಯೋದಲ್ಲಿ ನಿರ್ಮಿಸಿದ್ದ 249.6 ಅಂಕಗಳ ವಿಶ್ವ ದಾಖಲೆಯನ್ನು ಮುರಿದರು. ಅಲ್ಲದೇ 2024 ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು. ಅವನಿ ಈ ಸಾಧನೆ ಮಾಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿವೆ. ಪ್ರಧಾನಿ ನರೇಂದ್ರ ಮೋದಿಯಾದಿಯಾಗಿ (Narendra Modi) ಹಲವು ಗಣ್ಯರು ಟ್ವೀಟ್ ಮೂಲಕ ಅವನಿ ಲೇಖರಾ ಅವರ ಸಾಧನೆಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಐತಿಹಾಸಿಕ ಸಾಧನೆ ಮಾಡಿದ ಅವನಿ ಲೇಖರಾ ಅವರಿಗೆ ಅಭಿನಂದನೆಗಳು. ಮತ್ತಷ್ಟು ಯಶಸ್ಸುಗಳಿಸುವ ಮೂಲಕ ನೀವು ಇತರರಿಗೆ ಸ್ಪೂರ್ತಿಯಾಗಿದ್ದೀರ. ಅಭಿನಂದನೆಗಳು ನಿಮಗೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಟೋಕಿಯೋ ಪ್ಯಾರಾ ಒಲಿಂಪಿಕ್ಸ್ ಚಾಂಪಿಯನ್ ಅವನಿಗೆ ಶುಭ ಹಾರೈಸಿದ್ದಾರೆ.
ಇನ್ನು ಕಳೆದ ವರ್ಷ ನಡೆದ ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ 50 ಮೀಟರ್ ರೈಫಲ್ 3 ಪೊಸಿಷನ್ ಶೂಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ಅವನಿ ಲೇಖರಾ ಯಶಸ್ವಿಯಾಗಿದ್ದರು. ಈ ಮೂಲಕ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ 2 ಪದಕ ಗೆದ್ದ ಭಾರತದ ಮೊದಲ ಮಹಿಳಾ ಪ್ಯಾರಾಥ್ಲೀಟ್ ಎನ್ನುವ ಗೌರವಕ್ಕೆ ಅವನಿ ಪಾತ್ರರಾಗಿದ್ದರು.
ಶೂಟಿಂಗ್: ವಿಶ್ವದಾಖಲೆ ನಿರ್ಮಿಸಿದ ಅವನಿ ಲೇಖರಾ..!
ಅಭಿನವ್ ಬಿಂದ್ರಾ ಆತ್ಮಕತೆ ಓದಿ ಶೂಟರ್ ಆದ ಅವನಿ ಲೇಖರಾ!
ರಾಜಸ್ಥಾನದ ಜೈಪುರಲ್ಲಿ 2001ರಲ್ಲಿ ಜನಿಸಿದ ಅವನಿ ಲೇಖರ 2012ರಲ್ಲಿ ನಡೆದ ಕಾರು ಅಪಘಾತದಲ್ಲಿ ಬೆನ್ನು ಮೂಳೆಗೆ ತೀವ್ರ ಗಾಯವಾಗಿ ಪಾಶ್ರ್ವವಾಯು ಪೀಡಿತರಾಗಿದ್ದರು. ಮಾನಸಿಕವಾಗಿ ಕುಗ್ಗಿಹೋದ ಅವನಿ ಒಲಿಂಪಿಕ್ಸ್ ಚಿನ್ನ ವಿಜೇತ ಅಭಿನವ್ ಬಿಂದ್ರಾರ ಜೀವನಚರಿತ್ರೆ ಓದಿ ಕ್ರೀಡೆಯತ್ತ ಮುಖ ಮಾಡಿದರು. ಮೊದಲು ಆರ್ಚರಿ ಅಭ್ಯಾಸ ಮಾಡಿದರೂ ಬಳಿಕ ಶೂಟಿಂಗ್ ಕಲಿಯಲು ಶುರುವಿಟ್ಟರು. 2017ರಲ್ಲಿ ಯುಎಇಯಲ್ಲಿ ನಡೆದ ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ಅವನಿ ಬೆಳ್ಳಿ ಗೆದ್ದುಕೊಂಡರು. 2019ರಲ್ಲಿ ಕ್ರೊವೇಷಿಯಾದಲ್ಲಿ ಹಾಗೂ 2021ರಲ್ಲಿ ಯುಎಇಯಲ್ಲಿ ನಡೆದ ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ಬೆಳ್ಳಿಗೆ ಮುತ್ತಿಟ್ಟರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.