
ಕರಾಚಿ(ಅ.11): ದಕ್ಷಿಣ ಆಫ್ರಿಕಾದ ರಾಜಧಾನಿ ಕೇಪ್‌ಟೌನ್‌ನಲ್ಲಿ ಸೋಮವಾರದಿಂದ ಆರಂಭಗೊಂಡಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಯ (ಐಸಿಸಿ) ಮಹಾವೇಶನದಲ್ಲಿ ಭಾರತೀಯ ಕ್ರಿಕೆಟ್ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಅನುರಾಗ್ ಠಾಕೂರ್ ವಿರುದ್ಧ ಖಂಡನಾ ನಿರ್ಣಯ ಮಂಡಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಸಿದ್ಧತೆ ನಡೆಸಿದೆ.
ಇತ್ತೀಚೆಗೆ, ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧಗಳು ಹಾಗೂ ಎರಡೂ ದೇಶಗಳ ನಡುವಿನ ಕ್ರಿಕೆಟ್ ಸರಣಿಗಳ ಬಗ್ಗೆ ಹೇಳಿಕೆ ನೀಡಿದ್ದ ಠಾಕೂರ್, ಪಾಕಿಸ್ತಾನ ವಿರುದ್ಧ ಟೀಕಾಸ ಪ್ರಯೋಗಿಸಿದ್ದರು. ಐಸಿಸಿಯ ಸದಸ್ಯ ರಾಷ್ಟ್ರಗಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರೊಬ್ಬರು ಮತ್ತೊಂದು ಸದಸ್ಯ ರಾಷ್ಟ್ರದ ವಿರುದ್ಧ ಮಾತನಾಡುವುದು ಐಸಿಸಿ ನಿಯಮಗಳಿಗೆ ವಿರುದ್ಧವಾಗಿದೆಯೆಂದು ಹೇಳಿರುವ ಪಿಸಿಬಿ, ಐಸಿಸಿ ಮಹಾವೇಶದಲ್ಲೇ ಠಾಕೂರ್‌ಗೆ ಇರುಸು ಮುರುಸು ಉಂಟು ಮಾಡಲು ನಿರ್ಧರಿಸಿದೆ.
ಪಿಸಿಬಿ ಅಧ್ಯಕ್ಷ ಶಹರ್ಯಾರ್ ಖಾನ್ ಅವರು ಇತ್ತೀಚೆಗೆ ಹೃದಯ ಶಸ ಚಿಕಿತ್ಸೆಗೆ ಒಳಗಾಗಿದ್ದು ಐಸಿಸಿ ಸಭೆಯಲ್ಲಿ ಅವರು ಪಾಲ್ಗೊಳ್ಳುತ್ತಿಲ್ಲ. ಹಾಗಾಗಿ, ಪಿಸಿಬಿಯ ಮಹತ್ವದ ಕಾರ್ಯಕಾರಣಿ ಅಧ್ಯಕ್ಷರಾಗಿರುವ ಪಿಸಿಬಿ ಮಾಜಿ ಅಧ್ಯಕ್ಷರೂ ಆದ ನಿಜಾಮ್ ಸೇಥಿ ಸಾರಥ್ಯದಲ್ಲಿ ನಿಯೋಗವೊಂದು ಐಸಿಸಿ ಸಭೆಗೆ ತೆರಳಿದೆ. ಪಿಸಿಬಿಯ ಮುಖ್ಯ ಕಾರ್ಯನಿರ್ವಹಣಾಕಾರಿ ಸುಬಾನ್ ಅಹ್ಮದ್ ಸಹ ಈ ನಿಯೋಗದಲ್ಲಿದ್ದಾರೆ. ಕೇಪ್‌ಟೌನ್‌ಗೆ ತೆರಳುವ ಮುನ್ನ ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೇಥಿ, ಪಾಕಿಸ್ತಾನ ವಿರುದ್ಧ ತಾವು ನೀಡಿರುವ ಅವಹೇಳನಾಕಾರಿ ಹೇಳಿಕೆಗಳ ವಿರುದ್ಧ ಅನುರಾಗ್ ಠಾಕೂರ್ ಐಸಿಸಿ ಸಭೆಯಲ್ಲಿ ಸ್ಪಷ್ಟನೆ ನೀಡವಂತೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.