
ಲಂಡನ್(ಫೆ.25): ವಿಶ್ವದ ಮಾಜಿ ದಿಗ್ಗಜ ಫುಟ್ಬಾಲ್ ಆಟಗಾರ, ಬ್ರೆಜಿಲ್ ದಂತಕಥೆ ಪೀಲೆ ಅವರ ಪುತ್ರ ಎಡಿನೊ ಮಾದಕ ವಸ್ತು ಕಳ್ಳಸಾಗಣೆ ಆರೋಪದಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ಆರೋಪ ಸಾಬೀತಾಗಿದ್ದರಿಂದ ಪೀಲೆ ಪುತ್ರ ಎಡಿನೊಗೆ, ಸ್ಥಳೀಯ ಕೋರ್ಟ್ 13 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ ಎಂದು ವಕೀಲರು ಸ್ಪಷ್ಟಪಡಿಸಿದ್ದಾರೆ.
ಎಡಿನೊ 2005ರಲ್ಲಿ ಮಾದಕ ವಸ್ತುಗಳನ್ನು ಸಾಗಣೆ ಮಾಡುವ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು.
ಆರಂಭದಲ್ಲಿ ಎಡಿನೊ ಅವರಿಗೆ 33 ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗಿತ್ತು. ಈ ಸಂಬಂಧ ನ್ಯಾಯಾಲಯಕ್ಕೆ ಮರು ಅರ್ಜಿ ಸಲ್ಲಿಸಿದಾಗ ಶಿಕ್ಷೆಯ ಪ್ರಮಾಣವನ್ನು 12 ವರ್ಷ 10 ತಿಂಗಳಿಗೆ ಇಳಿಸಲಾಯಿತು.
ಪೀಲೆ ಅವರ ಸಾಂಟೂಸ್ ಫುಟ್ಬಾಲ್ ಕ್ಲಬ್‌ನಲ್ಲಿ ಎಡಿನೊ ಗೋಲ್ ಕೀಪರ್ ಆಗಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.