
ನವದೆಹಲಿ(ಡಿ.22): ಆಲ್ ಇಂಡಿಯಾ ಫುಟ್ಬಾಲ್ ಫೆಡರೇಷನ್'ಗೆ ಪ್ರಫುಲ್ ಪಟೇಲ್ 3ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಇಂದು ಅಧಿಕಾರ ಸ್ವೀಕರಿಸಿದ್ದಾರೆ.
4 ವರ್ಷಗಳ ಅವಧಿಗೆ ಅಧಿಕಾರದಲ್ಲಿರುವ ಅವರು, ಪಾರದರ್ಶಕ ಆಡಳಿತ ನಡೆಸಲಿದ್ದೇನೆ ಎಂದು ಪ್ರಫುಲ್ ಹೇಳಿದ್ದಾರೆ.
ಎಐಎಫ್'ಎಫ್ ಚುನಾವಣೆ ಸಂಬಂಧ ನೀಡಿದ್ದ ತಡೆಯಾಜ್ಞೆಯನ್ನು ದೆಹಲಿ ಹೈಕೋರ್ಟ್ ಬುಧವಾರ ತೆರವುಗೊಳಿಸಿದ್ದರಿಂದ ಇಂದು ನಡೆದ ವಾರ್ಷಿಕ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ನೇಮಿಸಲಾಯಿತು.
ನಿವೃತ್ತ ನ್ಯಾಯಮೂರ್ತಿ ಬಿಪಿನ್ ಚಂದ್ರ ಖಂಡಾಪಾಲ್ ಅವರನ್ನು ಕಾರ್ಯಕಾರಿ ಸಮಿತಿಯಲ್ಲಿ ನೇಮಿಸಲಾಗಿದ್ದು 2017ರಿಂದ 2020ರವರೆಗೆ ಖಂಡಾಪಾಲ್ ಅವರು ಅಧಿಕಾರದಲ್ಲಿರಲಿದ್ದಾರೆ. ಮಾಜಿ ಕೇಂದ್ರ ಸಚಿವ ಪ್ರಫುಲ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.