ಯು ಮುಂಬಾ ವಿರುದ್ಧ ಬೆಂಗಳೂರು ಬುಲ್ಸ್‌ಗೆ ವಿರೋಚಿತ ಸೋಲು

By Web DeskFirst Published Nov 14, 2018, 10:20 PM IST
Highlights

ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ತಮಿಳ್ ತಲೈವಾಸ್- ಹರಿಯಾಣ ಸ್ಟೀಲರ್ಸ್ ನಡುವಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾದರೆ, ನಮ್ಮ ಬೆಂಗಳೂರು ಬುಲ್ಸ್ ವಿರೋಚಿತ ಸೋಲು ಕಂಡಿದೆ. ಇಲ್ಲಿದೆ ಪಂದ್ಯದ ಹೈಲೈಟ್ಸ್.

ಮುಂಬೈ(ನ.14): ಯು ಮುಂಬಾ ವಿರುದ್ದದ ಪ್ರೊ ಕಬಡ್ಡಿ ಲೀಗ್ ಟೂರ್ನಿಯ 63ನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಮುಗ್ಗರಿಸಿದೆ. ರೋಚಕ ಹೋರಾಟದಲ್ಲಿ ಬೆಂಗಳೂರು 29-32 ಅಂಕಗಳ ಅಂತರದಲ್ಲಿ ಸೋಲು ಕಂಡಿತು.

ಆರಂಭದಿಂದಲೇ ಆಕ್ರಮಣಕಾರಿ ಆಟವಾಡಿದ ಯು ಮುಂಬಾ ಅಂಕಗಳಿಕೆಯಲ್ಲಿ ಮುನ್ನಡೆ ಪಡೆದುಕೊಂಡಿತು. ಮೊದಲಾರ್ಧದ ಅಂತ್ಯದಲ್ಲಿ 17-6 ಅಂಕಗಳ ಮುನ್ನಡೆ ಕಾಯ್ದುಕೊಂಡಿತು. ಇನ್ನು ದ್ವಿತಿಯಾರ್ಧದಲ್ಲಿ ಬೆಂಗಳೂರು ಹೋರಾಟ ನೀಡಿದರೂ ಗೆಲುವು ಸಾಧ್ಯವಾಗಲಿಲ್ಲ.

ಇದಕ್ಕೂ ಮೊದಲು ತಮಿಳ್ ತಲೈವಾಸ್ ಹಾಗೂ ಹರಿಯಾಣ ಸ್ಟೀಲರ್ಸ್ ನಡುವಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯಗೊಂಡಿದೆ. ಮೊದಲಾರ್ಧದಲ್ಲಿ ಹರಿಯಾಣ 19-15 ಅಂಕಗಳ ಮುನ್ನಡೆ ಪಡೆದುಕೊಂಡಿತ್ತು. ಆದರೆ ಸೆಕೆಂಡ್ ಹಾಫ್‌ನಲ್ಲಿ ತಮಿಳ್ ತೈಲವಾಸ್ 32-32 ಅಂಕಗಳ ಅಂತರದಲ್ಲಿ ಪಂದ್ಯವನ್ನ ಟೈ ಮಾಡಿಕೊಂಡಿತು.

click me!