7ನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿ ವೇಳಾಪಟ್ಟಿ ಪ್ರಕಟಗೊಂಡಿದೆ. ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಕಬಡ್ಡಿ ಟೂರ್ನಿ ಆರಂಭಗೊಳ್ಳಲಿದೆ. ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.
ಮುಂಬೈ(ಜೂ.21): ವಿಶ್ವಕಪ್ ಟೂರ್ನಿ ಮುಗಿಯುತ್ತಿದ್ದಂತೆ ಕ್ರೀಡಾಭಿಮಾನಿಗಳನ್ನು ರಂಜಿಸಲು ಪ್ರೊ ಕಬಡ್ಡಿ ಮತ್ತೆ ಬರುತ್ತಿದೆ. 7ನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿ ವೇಳಾಪಟ್ಟಿ ಪ್ರಕಟಗೊಂಡಿದೆ. ಜುಲೈ 20 ರಿಂದ 2019ರ ಪ್ರೊ ಕಬಡ್ಡಿ ಟೂರ್ನಿ ಆರಂಭಗೊಳ್ಳಲಿದೆ. ಉದ್ಘಾಟನಾ ಪಂದ್ಯದಲ್ಲಿ ಯು ಮುಂಬಾ ಹಾಗೂ ತೆಲುಗು ಟೈಟಾನ್ಸ್ ಹೋರಾಟ ನಡೆಸಲಿದೆ.
ಇದನ್ನೂ ಓದಿ: ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಚಾಂಪಿಯನ್
ಜುಲೈ 20 ರಂದು ಆರಂಭಗೊಳ್ಳಲಿರುವ ಪ್ರೊ ಕಬಡ್ಡಿ ಟೂರ್ನಿ ಅಕ್ಟೋಬರ್ 19 ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಜುಲೈ 20ರ 2ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಬೆಂಗಳೂರು ಬುಲ್ಸ್ ಹಾಗೂ ಪಾಟ್ನಾ ಪೈರೇಟ್ಸ್ ಮುಖಾಮುಖಿಯಾಗಲಿದೆ.
ಇದನ್ನೂ ಓದಿ: ಬೆಂಗಳೂರು ಬುಲ್ಸ್‌ನಿಂದ ಕನ್ನಡಿಗರು ಔಟ್!
ಬೆಂಗಳೂರು ಚರಣದ ಪಂದ್ಯಗಳು ಆಗಸ್ಟ್ 31 ರಿಂದ ಆರಂಭಗೊಳ್ಳಲಿದೆ. ಬೆಂಗಳೂರಿನಲ್ಲಿ ಒಟ್ಟು 11 ಪಂದ್ಯಗಳು ನಡೆಯಲಿದೆ. ಆಗಸ್ಟ್ 31 ರಿಂದ ಸೆಪ್ಟೆಂಬರ್ 6 ವರೆಗೆ ಬೆಂಗಳೂರಿನಲ್ಲಿ ಪಂದ್ಯ ಆಯೋಜಿಸಲಾಗಿದೆ. ಪ್ರೊ ಕಬಡ್ಡಿ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.