ಕಂಠೀರವದಲ್ಲಿ ಫುಟ್ಬಾಲ್‌ ವಿರೋಧಿಸಿ ಪ್ರತಿಭಟನೆ

By Kannadaprabha News  |  First Published Sep 7, 2019, 3:49 PM IST

ಬೆಂಗಳೂರಿನ ಹೃದಯಭಾಗದಲ್ಲಿರುವ ಶ್ರೀ ಕಂಠೀರವ ಸ್ಟೇಡಿಯಂನಲ್ಲಿ ಫುಟ್ಬಾಲ್ ಕ್ರೀಡೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ನಗರದ ಟೌನ್‌ ಹಾಲ್‌ ಮುಂದೆ  ನಡೆಸಲಾಯಿತು. ಈ ಕುರಿತಾದ ವರದಿ ಇಲ್ಲಿದೆ ನೋಡಿ...


ಬೆಂಗಳೂರು(ಸೆ.07): ಕಂಠೀರವ ಕ್ರೀಡಾಂಗಣವನ್ನು ಫುಟ್ಬಾಲ್‌ ಕ್ರೀಡೆಗೆ ನೀಡಬಾರದು ಎಂದು ಕರ್ನಾಟಕ ಅಥ್ಲೆಟಿಕ್ಸ್‌ ಸಂಸ್ಥೆ ಹಾಗೂ ಜಯ ಕರ್ನಾಟಕ ಸಂಘಟನೆ ಶುಕ್ರವಾರ ಜಂಟಿಯಾಗಿ ಪ್ರತಿಭಟನೆ ನಡೆಸಿತು. ನಗರದ ಟೌನ್‌ ಹಾಲ್‌ ಮುಂದೆ ಬೆಳಗ್ಗೆ 11 ಗಂಟೆಯಿಂದ 11.30ರ ವರೆಗೆ ರಾಜ್ಯ ಸರ್ಕಾರ, ಕ್ರೀಡಾ ಇಲಾಖೆ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಬಳಿಕ ಕ್ರೀಡಾಂಗಣಕ್ಕೆ ಮೆರವಣಿಗೆ ಮೂಲಕ ತೆರಳಿದರು.

ಕಂಠೀ​ರವದಲ್ಲಿ ಫುಟ್ಬಾಲ್‌ ನಡೆ​ಸಿ​ದರೆ ಉಪ​ವಾಸ ಸತ್ಯಾ​ಗ್ರ​ಹ: ಕೆಎಎ ಎಚ್ಚ​ರಿ​ಕೆ!

Tap to resize

Latest Videos

undefined

ಅಂತಾರಾಷ್ಟ್ರೀಯ ಅಥ್ಲೀಟ್‌ಗಳು, ಹಿರಿಯ ಅಥ್ಲೀಟ್‌ಗಳು, ಅಥ್ಲೆಟಿಕ್ಸ್‌ ಸಂಸ್ಥೆ ಪದಾಧಿಕಾರಿಗಳು, ಜಯ ಕರ್ನಾಟಕ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರುಗಳು ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ಇಲಾಖೆಯ ಭ್ರಷ್ಟಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಸಿಂಥೆಟಿಕ್‌ ಟ್ರ್ಯಾಕ್‌, ಕ್ರೀಡಾಂಗಣದಲ್ಲಿರುವ ಅವ್ಯವಸ್ಥೆಯನ್ನು ಈ ಕೂಡಲೇ ಪರಿಹರಿಸಬೇಕು, ಬಡ ಅಥ್ಲೀಟ್‌ಗಳಿಗೆ ನ್ಯಾಯ ದೊರೆಯುವವರೆಗೂ ಈ ಹೋರಾಟ ನಿಲ್ಲುವುದಿಲ್ಲ. ಹೋರಾಟ ನಿರಂತರವಾಗಿರುತ್ತದೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಶ್ರೀ ಕಂಠೀರವ ಕ್ರೀಡಾಂಗಣದ ಮುಖ್ಯ ದ್ವಾರದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಇಲಾಖೆಗೆ ಸಂಬಂಧಪಟ್ಟ ಮೇಲಾಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಎಂದು ಪಟ್ಟು ಹಿಡಿದರು. ಮೇಲಾಧಿಕಾರಿಗಳ ಗೈರು ಹಾಜರಿಯಲ್ಲಿ ಇಲಾಖೆ ಉಪ ನಿರ್ದೇಶಕ ಜಿತೇಂದ್ರ ಶೆಟ್ಟಿ, ಪ್ರತಿಭಟನಾಕಾರರ ಮನವಿ ಪತ್ರವನ್ನು ಪಡೆದರು.

ಪ್ರತಿಭಟನಾಕಾರರ ಮನವಿ ಪತ್ರವನ್ನು ಪಡೆಯಲಾಗಿದೆ. ಈ ಬಗ್ಗೆ ಸರ್ಕಾರ ಹಾಗೂ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಸೂಕ್ತವಾದ ನಿರ್ಣಯವನ್ನು ಸರ್ಕಾರ ಮತ್ತು ಇಲಾಖೆ ಶ್ರೀಘ್ರದಲ್ಲಿ ಕೈಗೊಳ್ಳುವ ವಿಶ್ವಾಸವಿದೆ.

- ಜಿತೇಂದ್ರ ಶೆಟ್ಟಿ, ಕ್ರೀಡಾ ಇಲಾಖೆ ಉಪ ನಿರ್ದೇಶಕ
 

click me!