
ಮುಂಬೈ(ಜು.30): ಟೀಂ ಇಂಡಿಯಾ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನಿಸಿದೆ. ಮತ್ತೊಂದೆಡೆ ಹಾಲಿ ಕೋಚ್ ರವಿ ಶಾಸ್ತ್ರಿಯನ್ನೇ ಮುಂದುವರಿಸೋ ಇರಾದೆಯಲ್ಲಿದೆ. ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರ ನಡುವೆ ಸ್ಪರ್ಧೆ ಎರ್ಪಟ್ಟಿದೆ. ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ರವಿಶಾಸ್ತ್ರಿ ಬದಲಿಸುವುದೇ ಒಳ್ಳೆಯದು ಎಂದ ರಾಬಿನ್ ಸಿಂಗ್
ಮಾಜಿ ಕ್ರಿಕೆಟಿಗ ಪ್ರವೀಣ್ ಆಮ್ರೆ, ಭಾರತ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಪ್ರವೀಣ್, ಐಪಿಎಲ್‌ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರತಿಭಾನ್ವೇಷಣೆ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಪ್ರಧಾನ ಕೋಚ್, ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್‌ಗಳ ಹುದ್ದೆಗೆ ಅರ್ಜಿ ಸಲ್ಲಿಸಲು ಮಂಗಳವಾರ (ಜು.30) ಕೊನೆ ದಿನವಾಗಿದೆ. ಈಗಾಗಲೇ ಪ್ರಧಾನ ಕೋಚ್ ಹುದ್ದೆಗೆ ರಾಬಿನ್ ಸಿಂಗ್ ಸೇರಿದಂತೆ ಇನ್ನೂ ಕೆಲ ಪ್ರಮುಖರು ಅರ್ಜಿ ಹಾಕಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.