ದಸರಾ ಕ್ರೀಡಾಕೂಟ ಉದ್ಘಾಟಿಸಿದ ಪಿವಿ ಸಿಂಧು!

By Web Desk  |  First Published Oct 1, 2019, 7:18 PM IST

ಮೈಸೂರು ದಸರಾ ಕ್ರೀಡಾಕೂಟವನ್ನು ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಉದ್ಘಾಟಿಸಿದ್ದಾರೆ. ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಿಂಧು ಕ್ರೀಡಾಕೂಟಕ್ಕೆ ಚಾಲನೆ ನೀಡಿದ್ದಾರೆ.


ಮೈಸೂರು(ಅ.01): ಮೈಸೂರು ದಸಾರ ಹಬ್ಬದ ಪ್ರಮುಖ ಆಕರ್ಷಣೆಯಾಗಿರುವ ದಸರಾ ಕ್ರೀಡಾಕೂಟವನ್ನು ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಉದ್ಘಾಟಿಸಿದರು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಇದನ್ನೂ ಓದಿ: ಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಇಲ್ಲಿದೆ: 

Tap to resize

Latest Videos

ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಸುಂದರ ಸಮಾರಂಭದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ, ವಸತಿ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಪರಿಮಳಾ ಶ್ಯಾಮ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

click me!