
ಕೌಲಾಲಂಪುರ(ಜೂ.30]: ಭಾರತದ ತಾರಾ ಶಟ್ಲರ್‌ಗಳಾದ ಪಿ.ವಿ. ಸಿಂಧು ಮತ್ತು ಕಿದಂಬಿ ಶ್ರೀಕಾಂತ್, ಇಲ್ಲಿ ನಡೆಯುತ್ತಿರುವ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಶುಕ್ರವಾರ ನಡೆದ ಮಹಿಳೆಯರ ಸಿಂಗಲ್ಸ್ ಕ್ವಾರ್ಟರ್ ಫೈನಲ್‌ನಲ್ಲಿ ಹಾಲಿ ಒಲಿಂಪಿಕ್ಸ್ ಚಾಂಪಿಯನ್, ಮಾಜಿ ವಿಶ್ವ ನಂ.1 ಸ್ಪೇನ್‌ನ ಕ್ಯಾರೋಲಿನಾ ಮರಿನ್ ವಿರುದ್ಧ 22-20, 21-19 ಗೇಮ್‌ಗಳಲ್ಲಿ ರೋಚಕ ಗೆಲುವು ಸಾಧಿಸಿದರು. 52 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಜಯಭೇರಿ ಬಾರಿಸಿದ ಸಿಂಧು, ಫೈನಲ್ ಪ್ರವೇಶಿಸಲು ವಿಶ್ವ ನಂ.1 ಹಾಗೂ ಅಗ್ರಶ್ರೇಯಾಂಕಿತೆ ಚೈನೀಸ್ ತೈಪೆಯ ತೈ ತ್ಸು ಯಿಂಗ್‌ರನ್ನು ಎದುರಿಸಲಿದ್ದಾರೆ.
ಪುರುಷರ ಸಿಂಗಲ್ಸ್ ಕ್ವಾರ್ಟರ್ ಫೈನಲ್‌ನಲ್ಲಿ ಕಾಮನ್‌ವೆಲ್ತ್ ಗೇಮ್ಸ್‌ನ ಬೆಳ್ಳಿ ವಿಜೇತ ಶ್ರೀಕಾಂತ್, 21-18, 21-14 ಗೇಮ್‌ಗಳಲ್ಲಿ ಫ್ರಾನ್ಸ್‌ನ ಬ್ರೈಸ್ ಲೆವರ್ಡೆಜ್‌ರನ್ನು ಸೋಲಿಸಿದರು. ಶ್ರೀಕಾಂತ್ ಎದುರಾಳಿಯನ್ನು ಬಗ್ಗುಬಡಿಯಲು ತೆಗೆದುಕೊಂಡಿದ್ದು ಕೇವಲ 39 ನಿಮಿಷಗಳು ಮಾತ್ರ. ಸೆಮಿಫೈನಲ್‌ನಲ್ಲಿ ಶ್ರೀಕಾಂತ್‌ಗೆ ಜಪಾನ್‌ನ ಕೆಂಟೊ ಮೊಮೊಟರಿಂದ ಸವಾಲು ಎದುರಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.