
ಜಕಾರ್ತ[ಜು.18]: ಭಾರತದ ತಾರಾ ಶಟ್ಲರ್‌ಗಳಾದ ಪಿ.ವಿ.ಸಿಂಧು ಹಾಗೂ ಕಿದಂಬಿ ಶ್ರೀಕಾಂತ್, ಬುಧವಾರ ಇಲ್ಲಿ ಆರಂಭಗೊಂಡ ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದಾರೆ. ಒಂದು ತಿಂಗಳ ವಿರಾಮದ ಬಳಿಕ ಅಂಕಣಕ್ಕಿಳಿದ ಇಬ್ಬರು, ಮೊದಲ ಸುತ್ತಿನಲ್ಲಿ ಆಕರ್ಷಕ ಪ್ರದರ್ಶನ ತೋರಿದರು.
ಮಹಿಳಾ ಸಿಂಗಲ್ಸ್ ಮೊದಲ ಸುತ್ತಿನಲ್ಲಿ ಸಿಂಧು, ಜಪಾನ್‌ನ ಅಯಾ ಒಹೊರಿ ವಿರುದ್ಧ 11-21, 21-15, 21-15 ಗೇಮ್‌ಗಳಲ್ಲಿ ಗೆಲುವು ಸಾಧಿಸಿದರು. ಈ ಋುತುವಿನಲ್ಲಿ ಮೊದಲ ಪ್ರಶಸ್ತಿ ಗೆಲ್ಲಲು ಕಾತರಿಸುತ್ತಿರುವ ಸಿಂಧು, 2ನೇ ಸುತ್ತಿನಲ್ಲಿ ಡೆನ್ಮಾರ್ಕ್ನ ಮಿಯಾ ಬ್ಲಿಚ್‌ಫೆಲ್ಟ್ ವಿರುದ್ಧ ಸೆಣಸಲಿದ್ದಾರೆ. ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲಿ ಜಪಾನ್‌ನ ಕೆಂಟಾ ನಿಶಿಮೊಟೊ ವಿರುದ್ಧ 21-14, 21-13 ಗೇಮ್‌ಗಳಲ್ಲಿ ಜಯಿಸಿದ ಶ್ರೀಕಾಂತ್, 2ನೇ ಸುತ್ತಿನಲ್ಲಿ ಹಾಂಕಾಂಗ್‌ನ ಲಾಂಗ್ ಅಂಗುಸ್‌ರನ್ನು ಎದುರಿಸಲಿದ್ದಾರೆ.
ಇದೇ ವೇಳೆ ಎಚ್.ಎಸ್.ಪ್ರಣಯ್ ಹಾಗೂ ಬಿ.ಸಾಯಿ ಪ್ರಣೀತ್ ಮೊದಲ ಸುತ್ತಿನ ಪಂದ್ಯದಲ್ಲೇ ಸೋತು ಹೊರಬಿದ್ದರು. ಮಿಶ್ರ ಡಬಲ್ಸ್‌ನ ಮೊದಲ ಸುತ್ತಿನಲ್ಲಿ ಸಾತ್ವಿಕ್ ಸಾಯಿರಾಜ್ ಹಾಗೂ ಅಶ್ವಿನಿ ಪೊನ್ನಪ್ಪ ಜೋಡಿ ಸಹ ಸೋಲುಂಡು ನಿರಾಸೆ ಅನುಭವಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.