
ಸೋಲ್: 2018ರ ಚಳಿಗಾಲದ ಒಲಿಂಪಿಕ್ಸ್ ಆರಂಭಕ್ಕೆ ಇನ್ನೆರಡು ವಾರ ಬಾಕಿ ಇದ್ದು, ದಾಖಲೆ ಪ್ರಮಾಣದಲ್ಲಿ ಕ್ರೀಡಾಪಟುಗಳಿಗೆ ಕಾಂಡೊಮ್ ಹಂಚಲು ಆಯೋಜಕರು ಸಿದ್ಧತೆ ನಡೆಸಿದ್ದಾರೆ.
ಎಚ್‌ಐವಿ ಸೋಂಕು ತಡೆಗಟ್ಟಲು ಈ ಕ್ರಮಕ್ಕೆ ಮುಂದಾಗಿರುವ ಆಯೋಜಕರು ಈ ವರ್ಷ 1,10,000 ಕಾಂಡೊಮ್‌ಗಳನ್ನು ಹಂಚುವುದಾಗಿ ಘೋಷಿಸಿದ್ದಾರೆ.
ಕಳೆದ ಆವೃತ್ತಿಗಿಂತ 10000 ಹೆಚ್ಚು ಕಾಂಡೊಮ್‌ಗಳನ್ನು ವಿತರಿಸಲಾಗುತ್ತಿದೆ. ಕೂಟದಲ್ಲಿ 2925 ಅಥ್ಲೀಟ್‌ಗಳು ಪಾಲ್ಗೊಳ್ಳುತ್ತಿದ್ದು, ಒಬ್ಬ ಅಥ್ಲೀಟ್‌ಗೆ 37 ಕಾಂಡೊಮ್‌ಗಳು ದೊರೆಯಲಿವೆ. ಕ್ರೀಡಾಕೂಟಕ್ಕೆ ಆತಿಥ್ಯ ವಹಿಸು ವ ಪೈಯೋಂಗ್ ಚಾಂಗ್, ಗ್ಯಾಂಗ್ ನ್ಯುಯಂಗ್‌ನ ಕ್ರೀಡಾ ಗ್ರಾಮದ ಟಾಯ್ಲೆಟ್‌ಗಳಲ್ಲಿ ಕಾಂಡೊಮ್‌ಗಳನ್ನು ಇರಿಸಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.