
ಆ್ಯಂಟಿಗಾ(ಆ.27): ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 318 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಇದೀಗ 2ನೇ ಪಂದ್ಯಕ್ಕೆ ತಯಾರಿ ಆರಂಭಗೊಂಡಿದೆ. ಆದರೆ ತಂಡದೊಳಗೆ ಎಲ್ಲವೂ ಸರಿಯಿಲ್ಲ ಮಾತು ಕೇಳಿ ಬರುತ್ತಿದೆ. ಅದರಲ್ಲೂ ನಾಯಕ ವಿರಾಟ್ ಕೊಹ್ಲಿ ಹಾಗೂ ಆರ್ ಅಶ್ವಿನ್ ನಡುವಿನ ಸಂಬಂಧ ಕೆಟ್ಟಿದೆ. ಹೀಗಾಗಿ ಅಶ್ವಿನ್‌ಗೆ ಸ್ಥಾನ ನೀಡಿಲ್ಲ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಕುರಿತು ಟ್ವೀಟ್ ಮೂಲಕ ಹಲವರು ಪ್ರಶ್ನಿಸಿದ್ದಾರೆ. ಇದೀಗ ಅಶ್ವಿನ್ ಎಲ್ಲಾ ಆರೋಪಗಳಿಗೆ ಉತ್ತರ ಕೊಟ್ಟಿದ್ದಾರೆ.
ಇದನ್ನೂ ಓದಿ: ವಿಚಿತ್ರ ಬೌಲಿಂಗ್ ಶೈಲಿಯಿಂದ ವಿಕೆಟ್ ಕಿತ್ತ ಅಶ್ವಿನ್
ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಹೊರಗಿಡಲು, ಕೊಹ್ಲಿ ಜೊತೆಗಿನ ಮುಸುಕಿನ ಗುದ್ದಾಟವೇ ಕಾರಣ. ಇದರಿಂದ ತಂಡದಿಂದಲೂ ಕೊಕ್ ನೀಡಲಾಗಿದೆ ಎಂದು ಟ್ವಿಟರ್‌ನಲ್ಲಿ ಟೀಕೆಗಳು ಕೇಳಿಬಂದಿತ್ತು. ಆದರೆ ಕೊಹ್ಲಿ ಜೊತೆಗೆ ಯಾವುದೇ ಮನಸ್ತಾಪವಿಲ್ಲ ಎಂದು ಅಶ್ವಿನ್ ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ನಮ್ಮೊಳಗೆ ಯಾವುದೇ ಜಗಳವಿಲ್ಲ. ಜೊತೆಯಾಗಿದ್ದೇವೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.
ಇದನ್ನೂ ಓದಿ: ಮೊದಲ ಟೆಸ್ಟ್ ನಲ್ಲಿ ವಿಂಡೀಸ್ ಬಗ್ಗುಬಡಿದ ಟೀಂ ಇಂಡಿಯಾ
ಸಮುದ್ರ ತೀರ ಹಾಗೂ ಸೂರ್ಯಾಸ್ತ ಅತ್ಯುತ್ತಮ ಸಂದರ್ಭ ಎಂದು ಅಶ್ವಿನ್ ಪೋಟೋ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಬಳಿಕ ಅಶ್ವಿನ್ ಮೇಲಿನ ಟೀಕೆಗಳು ಕಡಿಮೆಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.