3ನೇ ಟೆಸ್ಟ್ ಪಂದ್ಯಕ್ಕೆ ಆರ್ ಅಶ್ವಿನ್ ನಾಯಕ?

Published : Aug 14, 2018, 11:31 AM ISTUpdated : Sep 09, 2018, 10:01 PM IST
3ನೇ ಟೆಸ್ಟ್ ಪಂದ್ಯಕ್ಕೆ ಆರ್ ಅಶ್ವಿನ್ ನಾಯಕ?

ಸಾರಾಂಶ

ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ಹೀನಾಯ ಸೋಲು ಹಲವು ಬದಲಾವಣೆಗಳಿಗೆ ನಾಂದಿ ಹಾಡಲಿದೆ. ಇದೀಗ  ಟೀಂ ಇಂಡಿಯಾಗೆ ಇಂಜುರಿ ಸಮಸ್ಯೆ ಕೂಡ ಎದುರಾಗಿದೆ. ಹೀಗಾಗಿ 3ನೇ ಟೆಸ್ಟ್ ಪಂದ್ಯದಲ್ಲಿ ಆರ್ ಅಶ್ವಿನ್ ನಾಯಕರಾಗೋ ಸಾಧ್ಯತೆ ಇದೆ.

ಲಂಡನ್(ಆ.14): ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಹಿನ್ನಡೆ ಅನುಭವಿಸಿರುವ ಟೀಂ ಇಂಡಿಯಾ 3ನೇ ಪಂದ್ಯಕ್ಕೆ ಬದಲಾವಣೆ ಮಾಡಲು ಮುಂದಾಗಿದೆ. ನಾಯಕ ವಿರಾಟ್ ಕೊಹ್ಲಿ, ಕೋಚ್ ರವಿ ಶಾಸ್ತ್ರಿ ಕೂಡ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿರೋದು ಇದೀಗ ತಂಡವನ್ನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.

ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಬೆನ್ನು ನೋವಿಗೆ ತುತ್ತಾಗಿದ್ದರು. ಆದರೆ 3ನೇ ಟೆಸ್ಟ್ ಪಂದ್ಯ ಆಡೋ ವಿಶ್ವಾಸ ವ್ಯಕ್ತಪಡಿಸಿದ್ದರು. ಸದ್ಯ ಕೊಹ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಒಂದು ವೇಲೆ 3ನೇ ಪಂದ್ಯದ ವೇಳೆ ಫಿಟ್ ಆಗದಿದ್ದಲ್ಲಿ, ಟ್ರೆಂಟ್‌ಬ್ರಿಡ್ಜ್ ಪಂದ್ಯದಲ್ಲಿ ಭಾರತ ತಂಡವನ್ನ ಉಪನಾಯಕ ಅಜಿಂಕ್ಯ ರಹಾನೆ ಮುನ್ನಡೆಸಬೇಕಿದೆ.

ಉಪನಾಯಕ ರಹಾನೆ ಈಗಾಗಲೇ ಕಳಪೆ ಫಾರ್ಮ್‌ನಲ್ಲಿದ್ದಾರೆ. ಹೀಗಾಗಿ ರಹಾನೆ ಹನ್ನೊಂದರ ಬಳಗದಲ್ಲಿ ಆಡೋದೇ ಅನುಮಾನವಾಗಿದೆ. ರಹಾನೆಯೂ ತಂಡದಿಂದ ಹೊರಬಿದ್ದಲ್ಲಿ, ಆರ್ ಅಶ್ವಿನ್ ಟೀಂ ಇಂಡಿಯಾವನ್ನ ಮುನ್ನಡೆಸುವ ಸಾಧ್ಯತೆ ಇದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?