
ಪೋರ್ಟ್ ಎಲೆಜಿಬೆತ್(ಮಾ.13): ಆಸ್ಟ್ರೇಲಿಯಾ ವಿರುದ್ಧ 2ನೇ ಟೆಸ್ಟ್ ವೇಳೆ ಡೇವಿಡ್ ವಾರ್ನರ್'ರನ್ನು ಔಟ್ ಮಾಡಿದ ಸಂದರ್ಭದಲ್ಲಿ ಅನುಚಿತ ವರ್ತನೆ ತೋರಿದ್ದಕ್ಕಾಗಿ, ದ.ಆಫ್ರಿಕಾದ ವೇಗದ ಬೌಲರ್ ಕಗಿಸೊ ರಬಾಡ ಅವರನ್ನು 2 ಪಂದ್ಯಗಳಿಗೆ ನಿಷೇಧಗೊಳಿಸಲಾಗಿದೆ.
24 ತಿಂಗಳೊಳಗೆ 8 ಡೀಮೆರಿಟ್ ಅಂಕಗಳನ್ನು ಪಡೆದ ಕಾರಣ ರಬಾಡ ವಿರುದ್ಧ ಐಸಿಸಿ ಈ ಕ್ರಮಕೈಗೊಂಡಿದೆ. 2ನೇ ಟೆಸ್ಟ್'ನ ಮೊದಲ ಇನ್ನಿಂಗ್ಸ್ ವೇಳೆ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್'ರನ್ನು ರಬಾಡ ಉದ್ದೇಶಪೂರ್ವಕವಾಗಿ ತಳ್ಳಿದ್ದರು. ಪಂದ್ಯ ರೆಫ್ರಿ ನಡೆಸಿದ ವಿಚಾರಣೆ ವೇಳೆ ರಬಾಡ ತಪ್ಪೊಪ್ಪಿಕೊಂಡಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಸೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 6 ವಿಕೆಟ್'ಗಳ ಜಯ ಸಾಧಿಸಿದೆ. ಪಂದ್ಯದಲ್ಲಿ 11 ವಿಕೆಟ್ ಕಬಳಿಸಿದ್ದ ರಬಾಡ ಪಂದ್ಯಪುರುಷೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.