ಟೀಂ ಇಂಡಿಯಾ ಕೋಚ್ ಹುದ್ದೆಗೆ ದ್ರಾವಿಡ್ ಸೂಕ್ತ ವ್ಯಕ್ತಿ

By Suvarna Web DeskFirst Published May 26, 2017, 9:30 PM IST
Highlights

ಈಗಾಗಲೇ ಭಾರತ 'ಎ' ಹಾಗೂ 19 ವರ್ಷ ವಯಸ್ಸಿನೊಳಗಿನವರ ತಂಡದ ಕೋಚ್ ಆಗಿ ಯಶಸ್ವಿಯಾಗಿರುವ ದ್ರಾವಿಡ್ ಅವರನ್ನು ಹಿರಿಯರ ತಂಡದ ತರಬೇತುದಾರರನ್ನಾಗಿ ನೇಮಕ ಮಾಡುವುದು ಸೂಕ್ತವೆಂದಿದ್ದಾರೆ.

ಸಿಡ್ನಿ(ಮೇ.26): ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ 'ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್ ಭಾರತ ತಂಡದ ಮುಂದಿನ ಕೋಚ್ ಹುದ್ದೆಗೆ ಸೂಕ್ತ ವ್ಯಕ್ತಿಯೆಂದು ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕಿ ಪಾಂಟಿಂಗ್ ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಬಳಿಕ ಅನಿಲ್ ಕುಂಬ್ಳೆಯ ಮುಖ್ಯ ಕೋಚ್ ಹುದ್ದೆಯ ಅವಧಿ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಮುಂದಿನ ಕೋಚ್ ಯಾರಾಗಬೇಕು ಎನ್ನುವ ಕುರಿತು ಬಿಸಿಬಿಸಿ ಚರ್ಚೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪಂಟರ್, ಯುವಕರಿಗೆ ಸದಾ ಸ್ಪೂರ್ತಿಯ ಚಿಲುಮೆಯಂತಿರುವ ದ್ರಾವಿಡ್ ಕೋಚ್ ಹುದ್ದೆಗೆ ಅರ್ಹ ವ್ಯಕ್ತಿ ಎಂದಿದ್ದಾರೆ.

ಈಗಾಗಲೇ ಭಾರತ 'ಎ' ಹಾಗೂ 19 ವರ್ಷ ವಯಸ್ಸಿನೊಳಗಿನವರ ತಂಡದ ಕೋಚ್ ಆಗಿ ಯಶಸ್ವಿಯಾಗಿರುವ ದ್ರಾವಿಡ್ ಅವರನ್ನು ಹಿರಿಯರ ತಂಡದ ತರಬೇತುದಾರರನ್ನಾಗಿ ನೇಮಕ ಮಾಡುವುದು ಸೂಕ್ತವೆಂದಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಬಳಿಕ ಭಾರತ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು, ಆ ಬಳಿಕ ಮುಖ್ಯ ಕೋಚ್ ಅವರನ್ನು ಬಿಸಿಸಿಐ ಆಯ್ಕೆ ಮಾಡಲಿದೆ ಎನ್ನಲಾಗುತ್ತಿದೆ.

ಪ್ರಸ್ತುತ ತಂಡದ ಕೋಚ್ ಆಗಿರುವ ಅನಿಲ್ ಕುಂಬ್ಳೆ ಅವರ 1 ವರ್ಷದ ಒಪ್ಪಂದದ ಅವಧಿ ಜೂನ್ 20ಕ್ಕೆ ಅಂತ್ಯಗೊಳ್ಳಲಿದೆ.

ಬಿಸಿಸಿಐ ನೇಮಕ ಮಾಡಿರುವ ಸಲಹಾ ಸಮಿತಿ ಸದಸ್ಯರ ಶಿಫಾರಸನ್ನು ಆಧರಿಸಿ ಕೋಚ್ ಯಾರಾಗಬೇಕೆನ್ನುವುದನ್ನು ಆಯ್ಕೆ ಮಾಡಲಿದೆ. ಸಲಹಾ ಸಮಿತಿಯ ಸದಸ್ಯರಾಗಿ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಕಾರ್ಯನಿರ್ವಹಿಸುತ್ತಿದ್ದಾರೆ.

click me!