ಸದ್ಯದಲ್ಲೇ ದ್ರಾವಿಡ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.
ನವದೆಹಲಿ(ಏ.03): ಭಾರತ ‘ಎ’ ಹಾಗೂ ಅಂಡರ್-19 ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ ನೀಡಲು ಯೋಜನೆ ರೂಪಿಸಿದೆ. ಸದ್ಯದಲ್ಲೇ ದ್ರಾವಿಡ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.
ದ್ರಾವಿಡ್ To ಕೊಹ್ಲಿ: ಇಲ್ಲಿದೆ RCB ಕ್ಯಾಪ್ಟನ್ ಲಿಸ್ಟ್!
undefined
ಅಂಡರ್-19 ಹಾಗೂ ‘ಎ’ ತಂಡದ ಕೋಚ್ ಆಗಿ ಹಲವು ಯುವ ಕ್ರಿಕೆಟಿಗರು ಹಿರಿಯರ ತಂಡದ ಕದ ತಟ್ಟುವಂತೆ ಮಾಡುತ್ತಿರುವ ದ್ರಾವಿಡ್, ಗುಣಮಟ್ಟದ ಮಾರ್ಗದರ್ಶನ ನೀಡುತ್ತಿದ್ದಾರೆ. ಹೀಗಾಗಿ ಎನ್‌ಸಿಎ ಜವಾಬ್ದಾರಿಯನ್ನು ಅವರೇ ವಹಿಸಿಕೊಂಡರೆ ವ್ಯವಸ್ಥೆ ಮತ್ತಷ್ಟು ಸುಧಾರಿಸಲಿದೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಎನ್‌ಸಿಎ ಕೋಚ್‌ಗಳು, ಇತರ ಸಹಾಯಕ ಸಿಬ್ಬಂದಿ ನೇಮಕದಿಂದ ಹಿಡಿದು ಎಲ್ಲಾ ಕ್ರಿಕೆಟ್ ಚಟುವಟಿಕೆಗಳ ಉಸ್ತುವಾರಿಯನ್ನು ದ್ರಾವಿಡ್ ನೋಡಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಟೀಂ ಇಂಡಿಯಾದಲ್ಲಿ ರಾಹುಲ್ ದ್ರಾವಿಡ್ ಶಿಷ್ಯರ ದರ್ಬಾರು!
2018ರಲ್ಲಿ ನ್ಯೂಜಿಲೆಂಡ್’ನಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಪೃಥ್ವಿ ಶಾ ನೇತೃತ್ವದ ಕಿರಿಯರ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.