
ಬೆಂಗಳೂರು(ಜ.11): ಕ್ರಿಕೆಟ್ ದಂತಕತೆ ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ತಂದೆಯ ಹುಟ್ಟುಹಬ್ಬಕ್ಕೆ ಒಂದು ದಿನ ಮುಂಚಿತವಾಗಿಯೇ ಭರ್ಜರಿ ಗಿಫ್ಟ್ ನೀಡಿದ್ದಾರೆ. ಸದ್ಯ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಮಾರ್ಗದರ್ಶನ ನೀಡುತ್ತಿರುವ ದ್ರಾವಿಡ್ ಇಂದು 45ನೇ ವಸಂತಕ್ಕೆ ಕಾಲಿರಿಸಿದ್ದಾರೆ
'ವಾಲ್ ಖ್ಯಾತಿ'ಯ ರಾಹುಲ್ ದ್ರಾವಿಡ್ ಹಾಗೂ ಮಾಜಿ ಕ್ರಿಕೆಟಿಗ, ಲೆಗ್ ಸ್ಪಿನ್ನರ್ ಸುನಿಲ್ ಜೋಶಿ ಅವರ ಪುತ್ರರು ತಮ್ಮ ಅಪ್ಪಂದಿರಂತೆ ಕ್ರಿಕೆಟ್ ಅಂಗಳದಲ್ಲಿ ಮಿಂಚುತ್ತಿದ್ದು, ಕೆಎಸ್'ಸಿಎ ಆಯೋಜಿಸಿರುವ ಬಿಟಿಆರ್ ಕಪ್ ಅಂಡರ್-14 ಟೂರ್ನಿಯಲ್ಲಿ ಶತಕ ಸಿಡಿಸಿದ್ದಾರೆ.
ಮಲ್ಯ ಅದಿತಿ ಇಂಟರ್'ನ್ಯಾಷನಲ್ ಸ್ಕೂಲ್ ಪರ ಆಡಿದ ಸಮಿತ್ ದ್ರಾವಿಡ್ 150 ರನ್ ಪೇರಿಸಿದರೆ, ಆರ್ಯನ್ ಜೋಶಿ 154 ರನ್ ಬಾರಿಸಿದರು. ಇವರಿಬ್ಬರ ಸ್ಫೋಟಕ ಆಟದ ನೆರವಿನಿಂದ ಅದಿತಿ ಶಾಲೆ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 500 ರನ್ ಕೂಡಿಹಾಕಿತ್ತು. ಅಲ್ಲದೇ ಎದುರಾಳಿ ವಿವೇಕಾನಂದ ಶಾಲೆಯನ್ನು ಕೇವಲ 88 ರನ್'ಗಳಿಗೆ ಕಟ್ಟಿಹಾಕಿ 412 ರನ್'ಗಳ ಭರ್ಜರಿ ಗೆಲುವು ಸಾಧಿಸಿತು.
ಟೀಂ ಇಂಡಿಯಾದ ಮಾಜಿ ಆಟಗಾರರ ಪುತ್ರರ ಬ್ಯಾಟಿಂಗ್ ಪ್ರದರ್ಶನವನ್ನು ಗಮನಿಸಿದರೆ, ಮುಂದೊಂದು ದಿನ ಕರ್ನಾಟಕದ ಮತ್ತಿಬ್ಬರು ಪ್ರತಿಭೆಗಳು ಭಾರತ ಸೇರಿಕೊಳ್ಳುವತ್ತ ಹೆಜ್ಜೆಹಾಕುತ್ತಿದ್ದಾರೆ ಎಂದರೆ ಅತಿಶಯೋಕ್ತಿಯಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.