
ಶಿಮ್ಲಾ(ಡಿ.09): ಭಾರತ- ಶ್ರೀಲಂಕಾ ನಡುವೆ ಧರ್ಮಶಾಲಾದಲ್ಲಿ ಭಾನುವಾರ ನಿಗದಿಯಾಗಿರುವ ಮೊದಲ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಯನ್ನುಂಟು ಮಾಡುವ ಸಾಧ್ಯತೆಯಿದೆ. ಭಾನುವಾರ ಧರ್ಮಶಾಲಾದಲ್ಲಿ ವ್ಯಾಪಕ ಮಳೆ ಆಗಲಿದ್ದು, ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ, ‘ಮಳೆಬಿದ್ದರೆ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಸಜ್ಜಾಗಿದ್ದೇವೆ. ಮೈದಾನವನ್ನು ಸ್ವಚ್ಛಗೊಳಿಸಲು ನಮ್ಮ ಬಳಿ 3 ಸೂಪರ್ ಸೋಕರ್'ಗಳಿವೆ’ ಎಂದಿದ್ದಾರೆ.
ಮೋಡಕವಿದ ವಾತಾವರಣವಿರುತ್ತದೆ ಎನ್ನುವ ಕಾರಣ ಧರ್ಮಶಾಲಾ, ಮೊಹಲಿಯಲ್ಲಿ ನಡೆಯಲಿರುವ ಪಂದ್ಯಗಳನ್ನು ನಿಗದಿತ ಸಮಯಕ್ಕಿಂತ 2 ತಾಸು ಮೊದಲೇ ಆರಂಭಿಸಲು ಬಿಸಿಸಿಐ ಮೊದಲೇ ನಿರ್ಧರಿಸಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.