
ಕೋಲ್ಕತಾ(ಸೆ.19): ಸತತವಾಗಿ ಮಳೆ ಸುರಿಯುತ್ತಿದ್ದ ಕಾರಣ, ಇಂದು ಭಾರತ ಕ್ರಿಕೆಟ್ ತಂಡ ತನ್ನ ಅಭ್ಯಾಸ ಅವಧಿಯನ್ನು ರದ್ದುಗೊಳಿಸಬೇಕಾಯಿತು.
ಬುಧವಾರವೂ ಮಳೆ ಮುಂದುವರಿಯಲಿದ್ದು, ಗುರುವಾರದ ಪಂದ್ಯಕ್ಕೂ ಅಡಚಣೆ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಡನ್ ಗಾರ್ಡನ್ ಮೈದಾನದ ಪಿಚ್ ಒದ್ದೆಯಾಗದಂತೆ ಕ್ರೀಡಾಂಗಣ ಸಿಬ್ಬಂದಿ ಎಚ್ಚರ ವಹಿಸಿದ್ದಾರೆ.
ಇಂದು ಬೆಳಗ್ಗೆ ಅಭ್ಯಾಸಕ್ಕಾಗಿ ಕ್ರೀಡಾಂಗಣಕ್ಕೆ ಆಗಮಿಸಿದ ಆಸ್ಟ್ರೇಲಿಯಾ ಆಟಗಾರರಿಗೆ ಮಳೆ ಸ್ವಾಗತ ಕೋರಿತು. ಬ್ಯಾಟ್ಸ್'ಮನ್'ಗಳ ಒಳಾಂಗಣ ವ್ಯವಸ್ಥೆ ಬಳಸಿಕೊಂಡು ಅಭ್ಯಾಸ ನಡೆಸಿದರೆ, ವೇಗದ ಬೌಲರ್'ಗಳು ಹೋಟೆಲ್'ಗೆ ಹಿಂದಿರುಗಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.