ಚೆನ್ನೈ ವಿರುದ್ಧದ ಸೋಲಿನ ಬೆನ್ನಲ್ಲೇ RR ನಾಯಕ ರಹಾನೆಗೆ ಸಂಕಷ್ಟ!

Published : Apr 01, 2019, 06:32 PM IST
ಚೆನ್ನೈ ವಿರುದ್ಧದ ಸೋಲಿನ ಬೆನ್ನಲ್ಲೇ RR ನಾಯಕ ರಹಾನೆಗೆ ಸಂಕಷ್ಟ!

ಸಾರಾಂಶ

ಐಪಿಎಲ್ 2019ರಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ನಾಯಕ ಅಜಿಂಕ್ಯ ರಹಾನೆಗೆ ತೀವ್ರ ಹಿನ್ನಡೆಯಾಗಿದೆ. ಒಂದೆಡೆ ಸತತ ಸೋಲಿನಿಂದ ಕಂಗೆಟ್ಟಿರುವ ರಹಾನೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ.

ಚೆನ್ನೈ(ಏ.01): 12ನೇ ಆವೃತ್ತಿ ಐಪಿಎಲ್ ಟೂರ್ನಿ ರಾಜಸ್ಥಾನ ರಾಯಲ್ಸ್ ನಾಯಕ ಅಜಿಂಕ್ಯ ರಹಾನೆಗೆ ನಿರೀಕ್ಷಿತ ಆರಂಭ ನೀಡಿಲ್ಲ. ಆಡಿದ 3 ಪಂದ್ಯಗಳನ್ನ ಸೋತಿರುವ ರಾಜಸ್ಥಾನ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ಅಂತಿಮ ಹಂತದಲ್ಲಿ ಸೋಲು ಅನುಭವಿಸಿ ನಿರಾಸೆ ಅನುಭವಿಸಿತು. ಈ ಸೋಲಿನ ಬೆನ್ನಲ್ಲೇ ಅಜಿಂಕ್ಯ ರಹಾನೆಗೆ ಮತ್ತೊಂದು ಆಘಾತ ಎದುರಾಗಿದೆ.

ಇದನ್ನೂ ಓದಿ: IPL 2019: ರಾಜಸ್ಥಾನ ವಿರುದ್ಧ CSKಗೆ 8 ರನ್ ರೋಚಕ ಗೆಲುವು!

CSK ವಿರುದ್ದದ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದ ಕಾರಣಕ್ಕೆ ರಾಜಸ್ಥಾನ ನಾಯಕ ರಹಾನೆಗೆ ದಂಡ ವಿಧಿಸಲಾಗಿದೆ. ಪಂದ್ಯದ ಸಂಭಾವನೆಯನ್ನು ದಂಡದ ರೂಪದಲ್ಲಿ ರಹಾನೆ ಪಾವತಿಸಬೇಕಿದೆ. ರಹಾನೆ ಇದೀಗ 12 ಲಕ್ಷ ರೂಪಾಯಿ ಹಣವನ್ನು ದಂಡವಾಗಿ ಪಾವತಿಸಬೇಕಿದೆ. 

ಇದನ್ನೂ ಓದಿ: RCB ಹೀನಾಯ ಸೋಲಿನ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು..?

ರಹಾನೆಗೂ ಮುನ್ನ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾಗೆ ಸ್ಲೋ ಓವರ್ ರೇಟ್‌ಗೆ ದಂಡ ವಿದಿಸಲಾಗಿದೆ.  12ನೇ ಆವೃತ್ತಿಯಲ್ಲಿ ನಿದಾನಗತಿಯ ಓವರ್ ರೇಟ್‌ಗೆ ದಂಡ ವಿದಿಸಿದ 2ನೇ ನಾಯಕ ಅನ್ನೋ ಅಪಖ್ಯಾತಿಗೆ ಪಾತ್ರರಾಗಿದ್ದಾರೆ.  ಚೆನ್ನೈ ವಿರುದ್ಧ ರಾಜಸ್ಥಾನ ರಾಯಲ್ಸ್ ಕೇವಲ 8 ರನ್‌ಗಳ ವಿರೋಚಿತ ಸೋಲು ಅನುಭವಿಸಿತ್ತು. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರೈಸ್ಟ್‌ಚರ್ಚ್ ಪವಾಡ: ಕಿವೀಸ್ ಎದುರು ಐತಿಹಾಸಿಕ ಡ್ರಾ ಸಾಧಿಸಿದ ವೆಸ್ಟ್ ಇಂಡೀಸ್!
20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!