ರಣಜಿ ಟ್ರೋಫಿ: ಚೊಚ್ಚಲ ಜಯ ದಾಖಲಿಸಿದ ಕರ್ನಾಟಕ

Published : Dec 01, 2018, 04:06 PM IST
ರಣಜಿ ಟ್ರೋಫಿ: ಚೊಚ್ಚಲ ಜಯ ದಾಖಲಿಸಿದ ಕರ್ನಾಟಕ

ಸಾರಾಂಶ

ಈ ಗೆಲುವಿನೊಂದಿಗೆ ಕರ್ನಾಟಕ ಆಡಿದ 3 ಮೂರು ಪಂದ್ಯಗಳಲ್ಲಿ 2 ಡ್ರಾ ಹಾಗೂ ಒಂದು ಗೆಲುವಿನೊಂದಿಗೆ 12 ಅಂಕ ಕಲೆಹಾಕಿದೆ. ಇನ್ನು ಕರ್ನಾಟಕ ತಂಡವು ಡಿಸೆಂಬರ್ 06ರಂದು ರಾಜ್’ಕೋಟ್’ನಲ್ಲಿ ಸೌರಾಷ್ಟ್ರ ತಂಡವನ್ನು ಎದುರಿಸಲಿದೆ.

ಮೈಸೂರು[ಡಿ.01]: ಬ್ಯಾಟಿಂಗ್ ಹಾಗೂ ಬೌಲಿಂಗ್’ನಲ್ಲಿ ಸಂಘಟಿತ ಪ್ರದರ್ಶನ ತೋರಿದ ವಿನಯ್ ಕುಮಾರ್ ನೇತೃತ್ವದ ಕರ್ನಾಟಕ ತಂಡವು ಮಹರಾಷ್ಟ್ರ ಎದುರು 7 ವಿಕೆಟ್’ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಪ್ರಸಕ್ತ ಆವೃತ್ತಿಯ ಟೂರ್ನಿಯಲ್ಲಿ ಕರ್ನಾಟಕ ಚೊಚ್ಚಲ ಜಯ ದಾಖಲಿಸಿದೆ.

ಮಹರಾಷ್ಟ್ರ ತಂಡವು ವಿನಯ್ ಪಡೆಗೆ ಗೆಲ್ಲಲು 184 ರನ್’ಗಳ ಸವಾಲಿನ ಗುರಿ ನೀಡಿತ್ತು. ಮೂರನೇ ದಿನದಂತ್ಯಕ್ಕೆ ಕರ್ನಾಟಕ ವಿಕೆಟ್ ನಷ್ಟವಿಲ್ಲದೇ 54 ರನ್ ಬಾರಿಸಿತ್ತು. ಕೊನೆಯ ದಿನ ಗೆಲ್ಲಲು 130 ರನ್’ಗಳ ಅವಶ್ಯಕತೆಯಿತ್ತು. ನಾಲ್ಕನೇ ದಿನವೂ ಕರ್ನಾಟಕ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಕರ್ನಾಟಕ ಪರ ರಣಜಿ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ 18 ವರ್ಷದ ದೇವದತ್ತ ಪಡಿಕಲ್[77] ಚೊಚ್ಚಲ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಮತ್ತೋರ್ವ ಆರಂಭಿಕ ಬ್ಯಾಟ್ಸ್’ಮನ್ ಡಿ. ನಿಶ್ಚಲ್[61] ಎಚ್ಚರಿಕೆಯ ಆಟವಾಡಿ ಅರ್ಧಶತಕ ಪೂರೈಸಿದರು. ಮೊದಲ ವಿಕೆಟ್’ಗೆ ಈ ಜೋಡಿ 121 ರನ್’ಗಳ ಜತೆಯಾಟವಾಡಿತು. ಶತಕದತ್ತ ಮುನ್ನುಗ್ಗುತ್ತಿದ್ದ ಪಡಿಕ್ಕಲ್[77] ಬಚ್ಚವ್’ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇದರ ಬೆನ್ನಲ್ಲೇ ಕೆ. ಸಿದ್ದಾರ್ಥ್ ಕೂಡಾ ಕೇವಲ 4 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಅಬ್ಬಾಸ್[34*] ಹಾಗೂ ಪವನ್ ದೇಶ್’ಪಾಂಡೆ ಎಚ್ಚರಿಕೆ ಆಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಮಹರಾಷ್ಟ್ರ ಮೊದಲ ಇನ್ನಿಂಗ್ಸ್’ನಲ್ಲಿ 113 ಹಾಗೂ 2ನೇ ಇನ್ನಿಂಗ್ಸ್’ನಲ್ಲಿ 256 ರನ್ ಗಳಿಸಿತ್ತು. ಈ ಗೆಲುವಿನೊಂದಿಗೆ ಕರ್ನಾಟಕ ಆಡಿದ 3 ಮೂರು ಪಂದ್ಯಗಳಲ್ಲಿ 2 ಡ್ರಾ ಹಾಗೂ ಒಂದು ಗೆಲುವಿನೊಂದಿಗೆ 12 ಅಂಕ ಕಲೆಹಾಕಿದೆ. ಇನ್ನು ಕರ್ನಾಟಕ ತಂಡವು ಡಿಸೆಂಬರ್ 06ರಂದು ರಾಜ್’ಕೋಟ್’ನಲ್ಲಿ ಸೌರಾಷ್ಟ್ರ ತಂಡವನ್ನು ಎದುರಿಸಲಿದೆ.

ಸಂಕ್ಷಿಪ್ತ ಸ್ಕೋರ್:

ಮಹರಾಷ್ಟ್ರ: 113& 256

ಕರ್ನಾಟಕ: 186& 184/3

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?