ರಣಜಿ ಟ್ರೋಫಿ: ರಾಜ್ಯ ತಂಡಕ್ಕೆ ಮಯಾಂಕ್‌, ಗೌತಮ್ ವಾಪಸ್‌!

Published : Dec 14, 2018, 09:36 AM IST
ರಣಜಿ ಟ್ರೋಫಿ: ರಾಜ್ಯ ತಂಡಕ್ಕೆ ಮಯಾಂಕ್‌, ಗೌತಮ್ ವಾಪಸ್‌!

ಸಾರಾಂಶ

4 ಪಂದ್ಯಗಳಲ್ಲಿ 1 ಗೆಲುವು, 1 ಸೋಲು, 2 ಡ್ರಾಗಳೊಂದಿಗೆ ಕರ್ನಾಟಕ (12 ಅಂಕ) ‘ಎ’ ಗುಂಪಿನಲ್ಲಿ 5ನೇ ಸ್ಥಾನದಲ್ಲಿದೆ. 5 ಪಂದ್ಯಗಳನ್ನು ಆಡಿರುವ ಗುಜರಾತ್‌ 2 ಗೆಲುವು, 3 ಡ್ರಾಗಳೊಂದಿಗೆ 17 ಅಂಕ ಪಡೆದು 2ನೇ ಸ್ಥಾನ ಪಡೆದಿದೆ.

ಸೂರತ್‌[ಡಿ.14]: 2018-19ರ ರಣಜಿ ಟ್ರೋಫಿಯಲ್ಲಿ ಕರ್ನಾಟಕ, ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿದ್ದು ಇಂದಿನಿಂದ ಇಲ್ಲಿ ನಡೆಯಲಿರುವ ‘ಎ’ ಗುಂಪಿನ ಪಂದ್ಯದಲ್ಲಿ ಗುಜರಾತ್‌ ವಿರುದ್ಧ ಸೆಣಸಲಿದೆ. 

ಕಳೆದ ಪಂದ್ಯದಲ್ಲಿ ಸೌರಾಷ್ಟ್ರ ವಿರುದ್ಧ ಸೋಲುಂಡಿದ್ದ ಕರ್ನಾಟಕಕ್ಕೆ, ಈ ಪಂದ್ಯದಲ್ಲಿ ರನ್‌ ಮಷಿನ್‌ ಮಯಾಂಕ್‌ ಅಗರ್‌ವಾಲ್‌ ಹಾಗೂ ತಾರಾ ಆಲ್ರೌಂಡರ್‌ ಕೆ.ಗೌತಮ್‌ ಸೇವೆ ಲಭ್ಯವಾಗಲಿದೆ. ಗುರುವಾರ ಬೆಳಗ್ಗೆಯಷ್ಟೇ ನ್ಯೂಜಿಲೆಂಡ್‌ನಿಂದ ವಾಪಸಾದ ಈ ಇಬ್ಬರು, ತಂಡ ಕೂಡಿಕೊಂಡಿದ್ದಾರೆ. ಆದರೆ ಕಳೆದ ಪಂದ್ಯದಲ್ಲಿ ಆಡಿದ್ದ ಕರುಣ್‌ ನಾಯರ್‌, ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ.

4 ಪಂದ್ಯಗಳಲ್ಲಿ 1 ಗೆಲುವು, 1 ಸೋಲು, 2 ಡ್ರಾಗಳೊಂದಿಗೆ ಕರ್ನಾಟಕ (12 ಅಂಕ) ‘ಎ’ ಗುಂಪಿನಲ್ಲಿ 5ನೇ ಸ್ಥಾನದಲ್ಲಿದೆ. 5 ಪಂದ್ಯಗಳನ್ನು ಆಡಿರುವ ಗುಜರಾತ್‌ 2 ಗೆಲುವು, 3 ಡ್ರಾಗಳೊಂದಿಗೆ 17 ಅಂಕ ಪಡೆದು 2ನೇ ಸ್ಥಾನ ಪಡೆದಿದೆ. ‘ಎ’ ಹಾಗೂ ‘ಬಿ’ ಗುಂಪಿನಿಂದ ಒಟ್ಟು 5 ಅಗ್ರ ತಂಡಗಳು ಕ್ವಾರ್ಟರ್‌ ಫೈನಲ್‌ಗೆ ಪ್ರವೇಶ ಪಡೆಯಲಿವೆ. ಹೀಗಾಗಿ ರಾಜ್ಯ ತಂಡಕ್ಕೆ ಈ ಪಂದ್ಯ ಅತ್ಯಂತ ಮಹತ್ವದಾಗಿದೆ.

ಪಿಚ್‌ ಸ್ಪಿನ್ನರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದ್ದು, ಶ್ರೇಯಸ್‌, ಸುಚಿತ್‌ ಹಾಗೂ ಗೌತಮ್‌ ಪ್ರಮುಖ ಪಾತ್ರ ವಹಿಸಲಿದ್ದಾರೆ. ಗುಜರಾತ್‌ಗೆ ಕಾಯಂ ನಾಯಕ ಪಾರ್ಥೀವ್‌ ಪಟೇಲ್‌ ಸೇವೆ ಅಲಭ್ಯವಾಗಲಿದ್ದು, ಪ್ರಿಯಾಂಕ್‌ ಪಾಂಚಾಲ್‌ ತಂಡವನ್ನು ಮುನ್ನಡೆಸಲಿದ್ದಾರೆ.

ಕರ್ನಾಟಕ ತಂಡ: ವಿನಯ್‌ ಕುಮಾರ್‌ (ನಾಯಕ), ಶ್ರೇಯಸ್‌ ಗೋಪಾಲ್‌, ನಿಶ್ಚಲ್‌ ಡಿ., ಸಿದ್ಧಾಥ್‌ರ್‍ ಕೆ.ವಿ, ಆರ್‌.ಸಮಥ್‌ರ್‍, ಮಯಾಂಕ್‌ ಅಗರ್‌ವಾಲ್‌, ದೇವದತ್‌ ಪಡಿಕ್ಕಲ್‌, ಶರತ್‌ ಬಿ.ಆರ್‌, ಜೆ.ಸುಚಿತ್‌, ಅಭಿಮನ್ಯು ಮಿಥುನ್‌, ರೋನಿತ್‌ ಮೋರೆ, ಪವನ್‌ ದೇಶಪಾಂಡೆ, ಶರತ್‌ ಶ್ರೀನಿವಾಸ್‌, ಕೆ.ಗೌತಮ್‌, ಪ್ರತೀಕ್‌ ಜೈನ್‌.

ಪಂದ್ಯ ಆರಂಭ: ಬೆಳಗ್ಗೆ 9.30ಕ್ಕೆ, ನೇರ ಪ್ರಸಾರ: ಹಾಟ್‌ಸ್ಟಾರ್‌

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!