ರಣಜಿ ಟ್ರೋಫಿ: ಜಡೇಜಾ ದಾಳಿಗೆ ನಲುಗಿದ ಕರ್ನಾಟಕ

Published : Dec 07, 2018, 07:59 PM IST
ರಣಜಿ ಟ್ರೋಫಿ: ಜಡೇಜಾ ದಾಳಿಗೆ ನಲುಗಿದ ಕರ್ನಾಟಕ

ಸಾರಾಂಶ

ಮೊದಲು ಬ್ಯಾಟಿಂಗ್ ಮಾಡಿದ್ದ ಸೌರಾಷ್ಟ್ರ ಮೊದಲ ಇನ್ನಿಂಗ್ಸ್’ನಲ್ಲಿ 316 ರನ್ ಬಾರಿಸಿ ಸರ್ವಪತನ ಕಂಡಿತ್ತು. ಜೆ. ಸುಚಿತ್ 6 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದರು. ಇನ್ನು ಮೊದಲ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕದ ಆರಂಭ ಉತ್ತಮವಾಗಿರಲಿಲ್ಲ.

ರಾಜ್’ಕೋಟ್[ಡಿ.07]: ಧರ್ಮೇಂದರ್ ಸಿಂಗ್ ಜಡೇಜಾ ಮಾರಕ ಸ್ಪಿನ್ ದಾಳಿಗೆ ತತ್ತರಿಸಿದ ಕರ್ನಾಟಕ ತಂಡವು ಸೌರಾಷ್ಟ್ರ ಎದುರಿನ ರಣಜಿ ಪಂದ್ಯದಲ್ಲಿ ಕೇವಲ 217 ರನ್’ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಮೊದಲ ಇನ್ನಿಂಗ್ಸ್’ನಲ್ಲಿ 99 ರನ್’ಗಳ ಹಿನ್ನಡೆ ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಸೌರಾಷ್ಟ್ರ ಮೊದಲ ಇನ್ನಿಂಗ್ಸ್’ನಲ್ಲಿ 316 ರನ್ ಬಾರಿಸಿ ಸರ್ವಪತನ ಕಂಡಿತ್ತು. ಜೆ. ಸುಚಿತ್ 6 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದರು. ಇನ್ನು ಮೊದಲ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕದ ಆರಂಭ ಉತ್ತಮವಾಗಿರಲಿಲ್ಲ. ತಂಡದ ಮೊತ್ತ 25 ರನ್’ಗಳಾಗುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಡಿ. ನಿಶ್ಚಲ್[58] ಹಾಗೂ ಕರುಣ್ ನಾಯರ್[63] ಅರ್ಧಶತಕ ಸಿಡಿಸಿದ್ದು ಬಿಟ್ಟರೆ ಉಳಿದ ಬ್ಯಾಟ್ಸ್’ಮನ್ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾದರು.

ಧರ್ಮೇಂದರ್ ಸಿಂಗ್ ಜಡೇಜಾ ಕರ್ನಾಟಕದ ಪ್ರಮುಖ 7 ವಿಕೆಟ್ ಕಬಳಿಸಿ ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿದರು. ಕಮಲೇಶ್ ಮಕ್ವಾನ 2 ಹಾಗೂ ಯುವರಾಜ್ ಚುಡಸಮಾ 1 ವಿಕೆಟ್ ಕಬಳಿಸಿ ಮಿಂಚಿದರು.

ಸಂಕ್ಷಿಪ್ತ ಸ್ಕೋರ್:
ಸೌರಾಷ್ಟ್ರ: 316/10
ಜಯದೇವ್ ಶಾ: 97
ಜೆ. ಸುಚಿತ್: 111/6
ಕರ್ನಾಟಕ: 217/10
ಕರುಣ್ ನಾಯರ್: 63
ಜಡೇಜಾ: 103/7
[* ಎರಡನೇ ದಿನದಂತ್ಯಕ್ಕೆ)

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?