ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕನ್ನಡಿಗ ಸುನಿಲ್ ಜೋಶಿ ಉತ್ತರ ಪ್ರದೇಶ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕವಾಗಿದ್ದಾರೆ. ಭಾರತ ತಂಡದ ಬೌಲಿಂಗ್ ಕೋಚ್ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಜೋಶಿಗೆ ಇದೀಗ ಉತ್ತರ ಪ್ರದೇಶ ತಂಡದ ಕೋಚ್ ಆಗುವ ಅವಕಾಶ ಒದಗಿ ಬಂದಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಲಖನೌ[ಸೆ.04]: ಕರ್ನಾಟಕ ರಣಜಿ ತಂಡದ ಮಾಜಿ ನಾಯಕ ಸುನಿಲ್ ಜೋಶಿ, 2019-20ರ ಸಾಲಿನ ದೇಸಿ ಋುತುವಿನಲ್ಲಿ ಉತ್ತರ ಪ್ರದೇಶದ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅವರನ್ನು ಒಂದು ವರ್ಷ ಅವಧಿಗೆ ಕೋಚ್ ಆಗಿ ನೇಮಕ ಮಾಡಿಕೊಂಡಿರುವುದಾಗಿ ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ ಮಂಗಳವಾರ ಪ್ರಕಟಿಸಿದೆ.
ವಿಶ್ವಕಪ್ 2019: ಸುನಿಲ್ ಜೋಶಿ ಗುತ್ತಿಗೆ ವಿಸ್ತರಿಸದ ಬಾಂಗ್ಲಾದೇಶ
ನಾವು ಸುನಿಲ್ ಜೋಶಿ ಅವರನ್ನು ಒಂದು ವರ್ಷದ ಅವಧಿಗೆ ಕೋಚ್ ಆಗಿ ನೇಮಕ ಮಾಡಿಕೊಂಡಿದ್ದೇವೆ. ವಿಜಯ್ ಹಜಾರೆ ಟ್ರೋಫಿಗೂ ಮುನ್ನವೇ ಅವರು ತಂಡ ಕೂಡಿಕೊಳ್ಳಲಿದ್ದಾರೆ ಎಂದು ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಯದುವೀರ್ ಸಿಂಗ್ ತಿಳಿಸಿದ್ದಾರೆ. ಸುನಿಲ್ ಜೋಶಿ ಸೆ.20ರಂದು ಉತ್ತರಪ್ರದೇಶ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.
ಏಕದಿನ ವಿಶ್ವಕಪ್ ವರೆಗೂ ಬಾಂಗ್ಲಾದೇಶದ ಸ್ಪಿನ್ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಅವರು, ಇತ್ತೀಚೆಗೆ ಭಾರತ ತಂಡದ ಬೌಲಿಂಗ್ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಬಿಸಿಸಿಐ ಅವರನ್ನು ಆಯ್ಕೆ ಮಾಡಲಿಲ್ಲ.
ಸೆ.04ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ