ಉಮೇಶ್ ಯಾದವ್ ಮಾರಕ ದಾಳಿ-ರಣಜಿ ಫೈನಲ್‌ಗೆ ವಿದರ್ಭ!

Published : Jan 25, 2019, 02:27 PM IST
ಉಮೇಶ್ ಯಾದವ್ ಮಾರಕ ದಾಳಿ-ರಣಜಿ ಫೈನಲ್‌ಗೆ ವಿದರ್ಭ!

ಸಾರಾಂಶ

ವಿದರ್ಭ ಹಾಗೂ ಕೇರಳ ನಡುವಿನ ರಣಜಿ ಸೆಮಿಫೈನಲ್ ಪಂದ್ಯ ಕೇವಲ ಎರಡೇ ದಿನಕ್ಕೆ ಮುಕ್ತಾಯವಾಗಿದೆ.  ಉಮೇಶ್ ಯಾದವ್ ದಾಳಿಗೆ ಕುಸಿತ ಕೇರಳ ಹೀನಾಯ ಸೋಲು ಅನುಭವಿಸಿದೆ. ಇಲ್ಲಿದೆ ಪಂದ್ಯದ ಹೈಲೈಟ್ಸ್!  

ವಯನಾಡ್(ಜ.25): ಪ್ರಸಕ್ತ ರಣಜಿ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ನೀಡುತ್ತಿರುವ ವಿದರ್ಭ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿದೆ. ಕೇರಳ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 11 ರನ್ ಗೆಲುವು ಸಾಧಿಸಿದ ವಿದರ್ಭ ಸತತ 2ನೇ ಭಾರಿಗೆ ಫೈನಲ್ ಪ್ರವೇಶಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದನ್ನೂ ಓದಿ: 2019ರ ವಿಶ್ವಕಪ್: ಎಂ.ಎಸ್.ಧೋನಿಗೆ 4ನೇ ಕ್ರಮಾಂಕ!

ಇದೇ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ಕೇರಳ ತಂಡಕ್ಕೆ ನಿರಾಸೆಯಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಕೇರಳ ಕೇವಲ 106 ರನ್‌ಗಳಿಗೆ ಆಲೌಟ್ ಆಗಿತ್ತು. ಉಮೇಶ್ ಯಾದವ್ 7 ವಿಕೆಟ್ ಕಬಳಿಸೋ ಮೂಲಕ  ವಿದರ್ಭಕ್ಕೆ ಭರ್ಜರಿ ಯಶಸ್ಸು ತಂದುಕೊಟ್ಟಿದ್ದರು.

ವಿದರ್ಭ ಮೊದಲ ಇನ್ನಿಂಗ್ಸ್‌ನಲ್ಲಿ 208 ರನ್ ಸಿಡಿಸಿ ಆಲೌಟ್ ಆಗಿತ್ತು. ಫೈಯಜ್ ಫಜಲ್ 75 ರನ್ ಭಾರಿಸಿದರು. ಈ ಮೂಲಕ ವಿದರ್ಭ 102 ರನ್ ಮುನ್ನಡೆ ಪಡೆಯಿತು.  ಇನ್ನು ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕೇರಳ ಚೇತರಿಸಿಕೊಳ್ಳಲು ಅವಕಾಶ ಸಿಗಲಿಲ್ಲ. ಮತ್ತೆ ಉಮೇಶ್ ಯಾದವ್ ದಾಳಿಗೆ ಕುಸಿದ ಕೇರಳ 91 ರನ್‌ಗೆ ಆಲೌಟ್ ಆಯಿತು. ಈ ಮೂಲಕ ವಿದರ್ಭ ಇನ್ನಿಂಗ್ಸ್ ಹಾಗೂ 11 ರನ್ ಗೆಲುವು ಸಾಧಿಸಿತು. 

ಇದನ್ನೂ ಓದಿ: ನ್ಯೂಜಿಲೆಂಡ್ ಸರಣಿಗೆ ಪಾಂಡ್ಯ-ಭಾರತ ಎ ತಂಡಕ್ಕೆ ರಾಹುಲ್‌ ಆಯ್ಕೆ!

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಉಮೇಶ್ ಯಾದವ್ 5 ವಿಕೆಟ್ ಕಬಳಿಸಿದರು. ಎರಡನೇ ದಿನಕ್ಕೆ ಪಂದ್ಯ ಮುಗಿಸಿದ ವಿದರರ್ಭ ಇದೀಗ ರಣಜಿ ಟ್ರೋಫಿ ಫೈನಲ್ ಪ್ರವೇಶಿಸಿದೆ. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯತ್ತಿರುವ ಕರ್ನಾಟಕ ಹಾಗೂ ಸೌರಾಷ್ಟ್ರ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಗೆದ್ದ ತಂಡ, ಫೆಬ್ರವರಿ 3 ರಂದು ವಿದರ್ಭ ವಿರುದ್ದ ಫೈನಲ್ ಪಂದ್ಯ ಆಡಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ
U19 ಏಷ್ಯಾಕಪ್, 150 ರನ್‌ಗೆ ಪಾಕಿಸ್ತಾನ ಆಲೌಟ್ ಮಾಡಿದ ಟೀಂ ಇಂಡಿಯಾಗೆ 90 ರನ್ ಗೆಲುವು