ರಶೀದ್‌ ಖಾನ್‌ ಆಫ್ಘನ್‌ ಕ್ರಿಕೆಟ್‌ನ ನೂತನ ನಾಯಕ

Published : Jul 13, 2019, 03:55 PM IST
ರಶೀದ್‌ ಖಾನ್‌ ಆಫ್ಘನ್‌ ಕ್ರಿಕೆಟ್‌ನ ನೂತನ ನಾಯಕ

ಸಾರಾಂಶ

ವಿಶ್ವಕಪ್ ಟೂರ್ನಿಯಲ್ಲಿ ಆಫ್ಘಾನಿಸ್ತಾನ ಒಂದೂ ಗೆಲುವು ಕಾಣದೇ ಹೊರಬಿದ್ದ ಬೆನ್ನಲ್ಲೇ ಆಫ್ಘನ್ ನಾಯಕನ ತಲೆದಂಡವಾಗಿದ್ದು, ರಶೀದ್ ಖಾನ್ ಇದೀಗ ಮೂರೂ ಮಾದರಿಯ ಕ್ರಿಕೆಟ್‌ಗೆ ನಾಯಕರಾಗಿ ನೇಮಕವಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಕಾಬೂಲ್‌(ಜು.13): ತಾರಾ ಸ್ಪಿನ್ನರ್‌ ರಶೀದ್‌ ಖಾನ್‌ ಶುಕ್ರವಾರ ಆಫ್ಘಾನಿಸ್ತಾನ ಕ್ರಿಕೆಟ್‌ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಎಲ್ಲಾ ಮೂರೂ ಮಾದರಿಯಲ್ಲಿ ಅವರು ತಂಡವನ್ನು ಮುನ್ನಡೆಸಲಿದ್ದಾರೆ.  

ರಶೀದ್ ಖಾನ್ ಬಳಿ ಕ್ಷಮೆ ಕೇಳಿದ ಐಸ್‌ಲೆಂಡ್ ಕ್ರಿಕೆಟ್ ಮಂಡಳಿ!

ಕಳೆದ ತಿಂಗಳು ರಶೀದ್‌ರನ್ನು ಟಿ20 ತಂಡಕ್ಕೆ ಮಾತ್ರ ನಾಯಕನನ್ನಾಗಿ ಮಾಡಲಾಗಿತ್ತು. ಮಾಜಿ ನಾಯಕ ಅಸ್ಗರ್‌ ಆಫ್ಘನ್‌ರನ್ನು ಎಲ್ಲಾ ಮೂರು ಮಾದರಿಗೆ ಉಪನಾಯಕನನ್ನಾಗಿ ನೇಮಿಸಲಾಗಿದೆ. ಟಿ20 ಶ್ರೇಯಾಂಕದಲ್ಲಿ ನಂ.01 ಸ್ಥಾನದಲ್ಲಿರುವ ರಶೀದ್, ಏಕದಿನ ಶ್ರೇಯಾಂಕದಲ್ಲಿ 8ನೇ ಸ್ಥಾನದಲ್ಲಿದ್ದಾರೆ. ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ರಶೀದ್ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು. 

ವಿಶ್ವಕಪ್‌ಗೂ ಮುನ್ನ ಅಸ್ಗರ್‌ರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. ವಿಶ್ವಕಪ್‌ನಲ್ಲಿ ಗುಲ್ಬದಿನ್‌ ನೈಬ್‌ ತಂಡ ಮುನ್ನಡೆಸಿದ ರೀತಿ ಬಗ್ಗೆ ಆಫ್ಘಾನಿಸ್ತಾನ ಕ್ರಿಕೆಟ್‌ ಮಂಡಳಿ ಅಸಮಾಧಾನಗೊಂಡ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ ಮಾಡಲಾಗಿದೆ. 2018ರ ಏಷ್ಯಾಕಪ್ ಟೂರ್ನಿಯ ವೇಳೆ ಗಮನಾರ್ಹ ಪ್ರದರ್ಶನ ತೋರಿದ್ದ ಆಫ್ಘಾನಿಸ್ತಾನ, 2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಒಂದೂ ಗೆಲುವು ಕಾಣದೇ ತನ್ನ ಅಭಿಯಾನ ಅಂತ್ಯಗೊಳಿಸಿತ್ತು. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?