
ನವದೆಹಲಿ(ಅ.05): ಭಾರತದ ಕೋಚ್ ರವಿಶಾಸ್ತ್ರಿ ಅವರಿಗೆ ಮೊದಲ 3 ತಿಂಗಳ ಅವಧಿಗೆ ₹ 1.20 ಕೋಟಿ ಹಣವನ್ನು ಸಂಭಾವನೆ ರೂಪದಲ್ಲಿ ಬಿಸಿಸಿಐ ನೀಡಿದೆ.
ರವಿಶಾಸ್ತ್ರಿ, ಪ್ರಸಕ್ತ ವರ್ಷದ ಜುಲೈನಲ್ಲಿ ಭಾರತ ತಂಡಕ್ಕೆ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ 18 ಜುಲೈನಿಂದ 18 ಅಕ್ಟೋಬರ್ ಅವಧಿಯ ಸಂಭಾವನೆಯ ಹಣವನ್ನು ನೀಡಲಾಗಿದೆ ಎಂದು ಬಿಸಿಸಿಐ ತನ್ನ ವೆಬ್'ಸೈಟ್'ನಲ್ಲಿ ಪ್ರಕಟಿಸಿದೆ.
ಹಾಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಅವರಿಗೂ ತವರಿಂದಾಚೆ ನಡೆದಿರುವ ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಆಡಿದ ಸಂಭಾವನೆ ಹಣವಾದ ₹ 57.88 ಲಕ್ಷ ರುಪಾಯಿಗಳನ್ನು ನೀಡಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.