ಜಡೇಜಾ ದಾಖಲೆ- ಸಚಿನ್, ಕಪಿಲ್ ದೇವ್ ಸಾಲಿಗೆ ಸೇರಿದ ಆಲ್ರೌಂಡರ್!

By Web DeskFirst Published Mar 5, 2019, 8:35 PM IST
Highlights

ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ರವೀಂದ್ರ ಜಡೇಜಾ ಅಪರೂಪದ ದಾಖಲೆ ಬರೆದಿದ್ದಾರೆ. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಸಾಲಿಗೆ ಸೇರಿಕೊಂಡಿದ್ದಾರೆ. 
 

ನಾಗ್ಪುರ(ಮಾ.05): ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅತೀ ವೇಗವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 9000 ರನ್ ಪೂರೈಸಿದ ನಾಯಕ ಅನ್ನೋ ದಾಖಲೆ ಬರೆದಿದ್ದಾರೆ. ಇತ್ತ ರವೀಂದ್ರ ಜಡೇಜಾ ಕೂಡ ಅಪರೂಪದ ದಾಖಲೆ ಬರೆಯೋ ಮೂಲಕ ದಿಗ್ಗಜರ ಸಾಲಿನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸೆಕ್ಯೂರಿಟಿ ಕಣ್ತಪ್ಪಿಸಿ ಒಳ ನುಗ್ಗಿದ ಅಭಿಮಾನಿ ಜೊತೆ ಧೋನಿ ಫನ್!

ನಾಗ್ಪುರ ಪಂದ್ಯದಲ್ಲಿ ರವೀಂದ್ರ ಜಡೇಜಾ 21 ರನ್ ಸಿಡಿಸಿದರು. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ 2000 ರನ್ ಹಾಗೂ 150 ವಿಕೆಟ್ ಕಬಳಿಸಿದ ಭಾರತದ 3ನೇ ಕ್ರಿಕೆಟಿಗ ಅನ್ನೋ ದಾಖಲೆ ಬರೆದಿದ್ದಾರೆ. ಇದಕ್ಕೂ ಮೊದಲು ಕಪಿಲ್ ದೇವ್ ಹಾಗೂ ಸಚಿನ್ ತೆಂಡೂಲ್ಕರ್ ಈ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ: 40ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ..!

ರವೀಂದ್ರ ಜಡೇಜಾ 141 ಏಕದಿನ ಪಂದ್ಯದಿಂದ 172 ವಿಕೆಟ್ ಹಾಗೂ 2000 ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಇನ್ನು ಕಪಿಲ್ ದೇವ್ 225 ಏಕದಿನ ಪಂದ್ಯದಿಂದ 3783 ರನ್ ಹಾಗೂ 253 ವಿಕೆಟ್ ಕಬಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ 436 ಏಕದಿನ ಪಂದ್ಯದಿಂದ 18426 ರನ್ ಹಾಗೂ 154 ವಿಕೆಟ್ ಉರುಳಿಸಿದ್ದಾರೆ.
 

click me!