ಬಾಕ್ಸಿಂಗ್ ಡೇ ಟೆಸ್ಟ್’ನಲ್ಲಿ ಶತಕ ಬಾರಿಸುವೆ: ರಹಾನೆ

Published : Dec 25, 2018, 04:02 PM IST
ಬಾಕ್ಸಿಂಗ್ ಡೇ ಟೆಸ್ಟ್’ನಲ್ಲಿ ಶತಕ ಬಾರಿಸುವೆ: ರಹಾನೆ

ಸಾರಾಂಶ

ರಹಾನೆ ಆಡಿದ ಕೊನೆಯ 7 ಟೆಸ್ಟ್ ಪಂದ್ಯಗಳಲ್ಲಿ 5 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧ ನಾಟಿಂಗ್’ಹ್ಯಾಂ ಟೆಸ್ಟ್’ನಲ್ಲಿ 81 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಮೆಲ್ಬರ್ನ್‌[ಡಿ.25]: ಭಾರತ ಕ್ರಿಕೆಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬುಧವಾರದಿಂದ ಇಲ್ಲಿ ಆರಂಭಗೊಳ್ಳಲಿರುವ ಆಸ್ಪ್ರೇಲಿಯಾ ವಿರುದ್ಧದ 3ನೇ ಟೆಸ್ಟ್‌ನಲ್ಲಿ ಶತಕ ಇಲ್ಲವೇ ದ್ವಿಶತಕ ಬಾರಿಸುವ ವಿಶ್ವಾಸವಿದೆ ಎಂದಿದ್ದಾರೆ. 

ಮೆಲ್ಬರ್ನ್ ಟೆಸ್ಟ್’ಗೆ ಟೀಂ ಇಂಡಿಯಾ ಪ್ರಕಟ: 2 ಬದಲಾವಣೆ

2 ಟೆಸ್ಟ್‌ಗಳಲ್ಲಿ ಒಟ್ಟು 164 ರನ್‌ ಗಳಿಸಿರುವ ರಹಾನೆ, ವರ್ಷದ ಬಳಿಕ ಮೂರಂಕಿ ಮೊತ್ತ ದಾಖಲಿಸಲು ಕಾತರಿಸುತ್ತಿದ್ದಾರೆ. ಅವರು ಕೊನೆ ಬಾರಿಗೆ ಶತಕ ಬಾರಿಸಿದ್ದು ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ಶ್ರೀಲಂಕಾ ವಿರುದ್ಧ ಕೊಲಂಬೊ ಟೆಸ್ಟ್‌ನಲ್ಲಿ. ‘ಮೆಲ್ಬರ್ನ್‌ ಪಂದ್ಯದಲ್ಲಿ ದೊಡ್ಡ ಇನ್ನಿಂಗ್ಸ್‌ ಮೂಡಿಬರಲಿದೆ. ಅಡಿಲೇಡ್‌ ಹಾಗೂ ಪರ್ತ್’ನಲ್ಲಿ ನಾನು ಬ್ಯಾಟ್‌ ಮಾಡಿದ ರೀತಿ ನನ್ನಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಉತ್ತಮ ಲಯದಲ್ಲಿದ್ದು, 100 ಇಲ್ಲವೇ 200 ರನ್‌ ಬಾರಿಸಲಿದ್ದೇನೆ ಎನ್ನುವ ನಂಬಿಕೆ ಇದೆ’ ಎಂದು ರಹಾನೆ ಹೇಳಿದ್ದಾರೆ.

ಕಿವಿಸ್, ಆಸಿಸ್ ODIs,T20 ಸರಣಿಗೆ ಟೀಂ ಇಂಡಿಯಾ ಪ್ರಕಟ!

ರಹಾನೆ ಆಡಿದ ಕೊನೆಯ 7 ಟೆಸ್ಟ್ ಪಂದ್ಯಗಳಲ್ಲಿ 5 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧ ನಾಟಿಂಗ್’ಹ್ಯಾಂ ಟೆಸ್ಟ್’ನಲ್ಲಿ 81 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. 

ಭಾರತ-ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು 1-1ರ ಸಮಬಲ ಸಾಧಿಸಿದ್ದು, ಮೆಲ್ಬರ್ನ್’ನಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!
One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್