
ಮುಂಬೈ(ಮೇ.25): ಐಪಿಎಲ್ 11ನೇ ಆವೃತ್ತಿ ಪ್ಲೇ-ಆಫ್ ಪಂದ್ಯಗಳ ಸಮಯವನ್ನು ಬದಲಿಸಿದ ಬಿಸಿಸಿಐ ನಿರ್ಧಾರಕ್ಕೆ ಮನ್ನಣೆ ದೊರೆತಿದೆ. ಮೇ 22ರಂದು ಮುಂಬೈನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ಅಭಿಮಾನಿಗಳು ಆನ್‌ಲೈನ್ (ಹಾಟ್‌ಸ್ಟಾರ್)ನಲ್ಲಿ ದಾಖಲೆ ಪ್ರಮಾಣದಲ್ಲಿ ವೀಕ್ಷಿಸಿದ್ದಾರೆ.
ಹಾಟ್‌ಸ್ಟಾರ್ ಸಂಸ್ಥೆಯ ಅಧಿಕೃತ ಮಾಹಿತಿ ಪ್ರಕಾರ, ಏಕಕಾಲದಲ್ಲಿ ಆ ಪಂದ್ಯವನ್ನು ಬರೋಬ್ಬರಿ 82.6 ಲಕ್ಷ ಮಂದಿ ವೀಕ್ಷಿಸಿದ್ದಾರೆ. ಆ ಪಂದ್ಯವನ್ನು ಚೆನ್ನೈ 2 ವಿಕೆಟ್‌ಗಳಿಂದ ರೋಚಕವಾಗಿ ಗೆದ್ದುಕೊಂಡಿತ್ತು. 2012ರಲ್ಲಿ ಆಸ್ಟ್ರಿಯಾದ ಫೆಲಿಕ್ಸ್ ಬೌಮ್ಗಾರ್ಟ್ನರ್ ವಾಯುಮಂಡಲಕ್ಕೆ ಧುಮುಕಿದ್ದ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ 80 ಲಕ್ಷಕ್ಕೂ ಹೆಚ್ಚು ಜನ ನೇರ ಪ್ರಸಾರದಲ್ಲಿ ವೀಕ್ಷಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.