ಪದಾರ್ಪಣೆ ಪಂದ್ಯದಲ್ಲೇ ವಿಶ್ವದಾಖಲೆ ಬರೆದ ದಕ್ಷಿಣ ಆಫ್ರಿಕಾ ಬ್ಯಾಟ್ಸ್’ಮನ್

By Web DeskFirst Published Aug 5, 2018, 4:26 PM IST
Highlights

ಶ್ರೀಲಂಕಾ-ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಏಯ್ಡನ್ ಮಾರ್ಕ್’ರಮ್ ಬದಲು ತಂಡದಲ್ಲಿ ಸ್ಥಾನ ಪಡೆದ ರೀಜಾ ಹೆಂಡ್ರಿಕ್ಸ್ ಕೇವಲ 89 ಎಸೆತಗಳಲ್ಲಿ 102 ರನ್ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಚೊಚ್ಚಲ ಪಂದ್ಯದಲ್ಲಿಯೇ ಅತಿವೇಗದ ಶತಕ ಸಿಡಿಸಿದ ಆಟಗಾರ ಎನ್ನುವ ಕೀರ್ತಿಗೆ ಭಾಜನರಾಗಿದ್ದಾರೆ.

ಪಲ್ಲೆಕೆಲೆ[ಆ.05]: ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಸಿಕ್ಕ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಂಡ ದಕ್ಷಿಣ ಆಫ್ರಿಕಾದ ರೀಜಾ ಹೆಂಡ್ರಿಕ್ಸ್ ಪದಾರ್ಪಣಾ ಪಂದ್ಯದಲ್ಲಿಯೇ ಸ್ಫೋಟಕ ಶತಕ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ.

ಶ್ರೀಲಂಕಾ-ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಏಯ್ಡನ್ ಮಾರ್ಕ್’ರಮ್ ಬದಲು ತಂಡದಲ್ಲಿ ಸ್ಥಾನ ಪಡೆದ ರೀಜಾ ಹೆಂಡ್ರಿಕ್ಸ್ ಕೇವಲ 89 ಎಸೆತಗಳಲ್ಲಿ 102 ರನ್ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಚೊಚ್ಚಲ ಪಂದ್ಯದಲ್ಲಿಯೇ ಅತಿವೇಗದ ಶತಕ ಸಿಡಿಸಿದ ಆಟಗಾರ ಎನ್ನುವ ಕೀರ್ತಿಗೆ ಭಾಜನರಾಗಿದ್ದಾರೆ. ಈ ಮೊದಲು ಹಾಂಕಾಂಗ್’ನ ಮಾರ್ಕ್ ಚಾಪ್’ಮನ್ 116 ಎಸೆತಗಳಲ್ಲಿ ಅಜೇಯ 124 ರನ್ ಸಿಡಿಸಿದ್ದರು. ಇದುವರೆಗೆ ಕೆ.ಎಲ್ ರಾಹುಲ್, ಇಂಜಮಾಮ್ ಉಲ್-ಹಕ್, ಮಾರ್ಟಿನ್ ಗಪ್ಟೀಲ್ ಸೇರಿದಂತೆ ಒಟ್ಟು 14 ಮಂದಿ ಏಕದಿನ ಕ್ರಿಕೆಟ್’ನಲ್ಲಿ ಪದಾರ್ಪಣಾ ಪಂದ್ಯದಲ್ಲೇ ಶತಕ ಸಿಡಿಸಿದ್ದಾರೆ.

Latest Videos

ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ರೀಜಾ ಭರ್ಜರಿ ಶತಕ[102], ಜೆಪಿ ಡುಮಿನಿ[92] ಹಾಗೂ ಡೇವಿಡ್ ಮಿಲ್ಲರ್[51] ಸ್ಫೋಟಕ ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್’ಗಳಲ್ಲಿ 7 ವಿಕೆಟ್ ಕಳೆದುಕೊಂಡು 363 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಶ್ರೀಲಂಕಾ 23 ಓವರ್ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 138 ರನ್ ಬಾರಿಸಿದೆ.

[* ವಿವರ ಅಪೂರ್ಣ]   

click me!