ಟೆಸ್ಟ್’ನಲ್ಲಿ ಸಿಕ್ಸರ್ ಮೂಲಕ ಖಾತೆ ತೆರೆದ ರಿಶಭ್ ಪಂತ್

Published : Aug 19, 2018, 03:12 PM ISTUpdated : Sep 09, 2018, 08:37 PM IST
ಟೆಸ್ಟ್’ನಲ್ಲಿ ಸಿಕ್ಸರ್ ಮೂಲಕ ಖಾತೆ ತೆರೆದ ರಿಶಭ್ ಪಂತ್

ಸಾರಾಂಶ

ದಿನೇಶ್ ಕಾರ್ತಿಕ್ ಬದಲು ತಂಡದಲ್ಲಿ ಸ್ಥಾನ ಪಡೆದ ಪಂತ್ ತಾವೆದುರಿಸಿದ ಎರಡನೇ ಎಸೆತದಲ್ಲೇ ಭರ್ಜರಿ ಸಿಕ್ಸರ್ ಸಿಡಿಸುವುದರೊಂದಿಗೆ ಟೆಸ್ಟ್ ವೃತ್ತಿಜೀವನ ಆರಂಭಿಸಿದ್ದಾರೆ. 

ನಾಟಿಂಗ್’ಹ್ಯಾಮ್[ಆ.19]: ಭಾರತ-ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿದ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ರಿಶಭ್ ಪಂತ್ ಸ್ಫೋಟಕ ಸಿಕ್ಸರ್ ಸಿಡಿಸುವ ಮೂಲಕ ಖಾತೆ ತೆರೆದು ಗಮನ ಸೆಳೆದಿದ್ದಾರೆ.

ದಿನೇಶ್ ಕಾರ್ತಿಕ್ ಬದಲು ತಂಡದಲ್ಲಿ ಸ್ಥಾನ ಪಡೆದ ಪಂತ್ ತಾವೆದುರಿಸಿದ ಎರಡನೇ ಎಸೆತದಲ್ಲೇ ಭರ್ಜರಿ ಸಿಕ್ಸರ್ ಸಿಡಿಸುವುದರೊಂದಿಗೆ ಟೆಸ್ಟ್ ವೃತ್ತಿಜೀವನ ಆರಂಭಿಸಿದ್ದಾರೆ. ಆದಿಲ್ ರಶೀದ್ ಬೌಲಿಂಗ್’ನಲ್ಲಿ ಸಿಕ್ಸರ್ ಸಿಡಿಸಿ ರನ್ ಖಾತೆ ತೆರೆದರು.

ಪಂತ್ ಸಿಕ್ಸರ್ ಸಿಡಿಸಿದ ವಿಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ಮೊದಲ ದಿನದಾಟ ಮುಕ್ತಾಯಕ್ಕೆ 6 ವಿಕೆಟ್ ನಷ್ಟಕ್ಕೆ 307 ರನ್ ಕಲೆ ಹಾಕಿದೆ. ರಿಶಭ್ ಪಂತ್ ಅಜೇಯ 22 ರನ್ ಸಿಡಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದಿರಿಸಿಕೊಂಡಿದ್ದರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Vaibhav Sooryavanshi: 149 ವರ್ಷಗಳ ಇತಿಹಾಸದಲ್ಲೇ ಮೊದಲು! ಇಡೀ ಜಗತ್ತೇ ತಿರುಗಿ ನೋಡುವಂತೆ ಮಾಡಿದ ವೈಭವ್ ಸೂರ್ಯವಂಶಿ ಐತಿಹಾಸಿಕ ರೆಕಾರ್ಡ್!
Cricketer Love Story: ಪ್ರೇಮ ಪಾಶದಲ್ಲಿ ಮಿಡ್ಲ್ ಓವರ್ಸ್ ಕಿಂಗ್ ಲಾಕ್! ಮಿಸ್ಟ್ರಿ ಗರ್ಲ್ ಸೌಂದರ್ಯಕ್ಕೆ ಕ್ಲೀನ್ ಬೌಲ್ಡ್ ಆದ ಭಾರತೀಯ ಸ್ಟಾರ್‌ ಪ್ಲೇಯರ್!