
ಮುಂಬೈ(ಜು.30): ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ ಹಾಗೂ ಪತ್ನಿ ರಿತಿಕಾ ಸಾಜ್ದೆ ರೋಮ್ಯಾಂಟಿಕ್ ಜೋಡಿ ಎಂದೇ ಗುರುತಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಜೋಡಿ ಹಾಕಿರೋ ಹಲವು ಫೋಟೋಗಳನ್ನ ರೋಮ್ಯಾಂಟಿಕ್ ಜೋಡಿ ಹೆಸರನ್ನ ಖಚಿತಪಡಿಸಿತ್ತು. ಆದರೆ ಇದೇ ಮೊದಲ ಬಾರಿಗೆ ರೋಹಿತ್ ಶರ್ಮಾಗೆ ಗೊಂದಲ ಶುರುವಾಗಿದೆ.
ಇಂಗ್ಲೆಂಡ್ ಪ್ರವಾಸ ಮುಗಿಸಿ ತವರಿಗೆ ವಾಪಾಸ್ಸಾದ ರೋಹಿತ್ ಶರ್ಮಾ ರಿಲ್ಯಾಕ್ಸ್ ಮೂಡ್‌ಗೆ ಜಾರಿದ್ದಾರೆ. ಆದರೆ ಈ ವೇಳೆ ಪತ್ನಿ ರಿತಿಕಾ ಸಾಜ್ದೆ ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ವೇಳೆ ಫೋಟೋ ಕ್ಲಿಕ್ಕಿಸಿರುವ ರೋಹಿತ್ ಇನ್‌ಸ್ಟ್ರಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಮ್ಯಾನೇಜರ್‌ನ್ನ ಮದುವೆಯಾದರೆ ಸಮಸ್ಯೆ ಎಂದು ಬರೆದಿರುವ ರೋಹಿತ್ ಶರ್ಮಾ, ರಿತಿಕಾ ಫೋಟೋ ಪೋಸ್ಟ್ ಮಾಡಿ ಪತ್ನಿಯ ಕಾಲೆಳೆದಿದ್ದಾರೆ. ಇದಕ್ಕೆ ಮಾಜಿ ನಾಯಕ ಎಂ ಎಸ್ ಧೋನಿ ಪತ್ನಿ ಸಾಕ್ಷಿ ಧೋನಿ, ಯುವರಾಜ್ ಸಿಂಗ್ ಸೇರಿದಂತೆ ಹಲವು ಕ್ರಿಕೆಟಿಗರು ಪ್ರತಿಕ್ರಿಯಿಸಿದ್ದಾರೆ. ರೋಹಿತ್ ಪೋಸ್ಟ್‌ಗೆ ಪತ್ನಿ ರಿತಿಕಾ ಗರಂ ಆಗಿದ್ದಾರೆ.
ರೋಹಿತ್ ಶರ್ಮಾ ಪತ್ನಿ ರಿತಿಕ ಸಾಜ್ದೆ ಕ್ರಿಕೆಟ್ ಮ್ಯಾನೇಜ್ಮೆಂಟ್ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮದುವೆಗೂ ಮುನ್ನ ರೋಹಿತ್ ಶರ್ಮಾ ಅವರ ಸ್ಪೋರ್ಟ್ ಇವೆಂಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆರಂಭದಲ್ಲಿ ಇವರ ಪರಿಚಯ ಸ್ನೇಹಕ್ಕೆ ತಿರುಗಿ, 2015ರಲ್ಲಿ ಮದುವೆಯಾದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.