
ನವದೆಹಲಿ(ನ.01): ಎರಡನೇ ಬಾರಿಗೆ ಏಷ್ಯಾ ಚಾಂಪಿಯನ್ಸ್ ಟ್ರೋಫಿ ಪಡೆದ ಬೆನ್ನಿಗೇ ರಾಷ್ಟ್ರೀಯ ಹಾಕಿ ಕೋಚ್ ರೋಲಂಟ್ ಓಲ್ಟ್‌ಮನ್ಸ್ ಅವರ ಒಪ್ಪಂದವನ್ನು 2020ರ ಒಲಿಂಪಿಕ್‌ವರೆಗೂ ಹಾಕಿ ಇಂಡಿಯಾ ವಿಸ್ತರಿಸಿದೆ.
‘‘ಹಾಲೆಂಡ್ ಮೂಲದ ಓಲ್ಟ್‌ಮನ್ಸ್ ಅವರೊಂದಿಗಿನ ಒಪ್ಪಂದವು 2017ಕ್ಕೆ ಕೊನೆಯಾಗಲಿದೆ. ಆದರೆ, ಅವರ ಮಾರ್ಗದರ್ಶನದಲ್ಲಿ ತಂಡ ಮಹತ್ವದ ಪ್ರದರ್ಶನ ನೀಡುತ್ತಾ ಸಾಗಿದ್ದು ಅವರನ್ನು 2020ರ ಟೋಕಿಯೊ ಒಲಿಂಪಿಕ್ಸ್ ಕೂಟದವರೆಗೂ ತಂಡದ ಕೋಚ್ ಆಗಿ ಮುಂದುವರೆಸಲು ನಿರ್ಧರಿಸಲಾಗಿದೆ. ಇದಕ್ಕೆ ಓಲ್ಟ್‌ಮನ್ಸ್ ಕೂಡ ಒಪ್ಪಿಗೆ ನೀಡಿದ್ದು, ಇದನ್ನು ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್)ಕ್ಕೆ ತಿಳಿಸಲಾಗಿದೆ’’ ಎಂದು ಹಾಕಿ ಇಂಡಿಯಾ ಕಾರ್ಯದರ್ಶಿ ನರೀಂದರ್ ಬಾತ್ರಾ ಹೇಳಿದ್ದಾರೆ.
ಅಂದಹಾಗೆ ಓಲ್ಟ್‌ಮನ್ಸ್ ಮಾರ್ಗದರ್ಶನದಲ್ಲಿ ಭಾರತ ತಂಡ 2015ರ ವರ್ಲ್ಡ್ ಲೀಗ್ ಸೆಮಿಫೈನಲ್‌ನಲ್ಲಿ ಕಂಚು ಗೆದ್ದರೆ, ಜೂನ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಬೆಳ್ಳಿ ಪದಕ ಜಯಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.